ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

Date:

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು ವಿಮಾನವೊಂದು ವಿಮಾನ ನಿಲ್ದಾಣದ ಸಮೀಪದ ತೊಗರಿ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಮಂಗಳವಾರ ಸಂಜೆ ಕಲಬುರಗಿಯಲ್ಲಿ ನಡೆದಿದೆ.

- Advertisement -

ನಗರದ ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ಸಮೀಪ, ರಸ್ತೆಯ ಪಕ್ಕದ ತೊಗರಿ ಹೊಲದಲ್ಲಿ ವಿಮಾನ ಇಳಿದಿದೆ. ವಿಮಾನದಲ್ಲಿ ಇಬ್ಬರು ತರಬೇತಿ ಪೈಲಟ್‌ಗಳು ಇದ್ದರು ಎಂದು ತಿಳಿದುಬಂದಿದ್ದು, ಇಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಪೈಲಟ್‌ಗಳು ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ವಿಮಾನ ನಿಲ್ದಾಣಕ್ಕೆ ಮರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಮೀಪದಲ್ಲಿದ್ದ ಕೃಷಿ ಜಮೀನನ್ನು ಗುರುತಿಸಿ, ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ್ದಾರೆ ಎನ್ನಲಾಗಿದೆ.

ವಿಮಾನ ತೊಗರಿ ಜಮೀನಿನಲ್ಲಿ ಇಳಿದಿರುವ ಸುದ್ದಿ ಹರಡುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದರು. ಘಟನೆಯಿಂದ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Advertisements
Advertisements

ಇದನ್ನು ಓದಿದ್ದೀರಾ? ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...