ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಯ ಸೋಲಾರ್ ಗಾರ್ಡನ್ ಹತ್ತಿರದ ಕಾಲುವೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಮಳಖೇಡ ಗ್ರಾಮದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಭಾಗ್ಯಶ್ರೀ ಚನ್ನವೀರಪ್ಪ(25) ಎಂದು ಗುರುತಿಸಲಾಗಿದೆ.
ಮೃತ ಭಾಗ್ಯಶ್ರೀ ದ್ವಿತೀಯ ಪಿಯುಸಿ ಮುಗಿಸಿದ ನಂತರ ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿದ್ದರು. ಸೆಪ್ಟೆಂಬರ್ 11ರಂದು ಸಂಜೆ ನಿಗೂಢವಾಗಿ ಕಾಣೆಯಾಗಿದ್ದ ಭಾಗ್ಯಶ್ರೀ, ಬಳಿಕ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ-2025 ಜಾರಿ: ದಶಕಗಳ ಹೋರಾಟಕ್ಕೆ ದೊರೆತ ನ್ಯಾಯ
ಈ ಘಟನೆ ಸಹಜ ಸಾವಲ್ಲ, ವಿದ್ಯಾರ್ಥಿನಿಯನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲೂಕು ಘಟಕದ ಅಧ್ಯಕ್ಷ ಗೋಪಾಲ ನಾಟೇಕಾರ್ ಆರೋಪಿಸಿದ್ದಾರೆ.
ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಿ, ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ.