ಕಲಬುರಗಿ | ಕೇಂದ್ರ ಕಾರಾಗೃಹದಿಂದ ಪರಾರಿ; ಗುಂಡು ಹಾರಿಸಿ ಕೈದಿಯ ಸೆರೆ

Date:

ಕೇಂದ್ರ ಕಾರಾಗೃಹದಿಂದ ಗೋಡೆ ಹಾರಿ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಮುಂಜಾನೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.

- Advertisement -

ಮಂಗಳವಾರ ಬೆಳಗಿನ ಜಾವ 4.35ರ ಸುಮಾರಿಗೆ ಬೀದರ್ ಜಿಲ್ಲೆಯ ಮಸ್ತಾನ್, ಸಂತೋಷ್ ಹಾಗೂ ಸಾಗರ ಎಂಬ ಮೂವರು ಕೈದಿಗಳು ಕೇಂದ್ರ ಕಾರಾಗೃಹದ ಭದ್ರತಾ ಗೋಡೆ ಹಾರಿ ಪರಾರಿಯಾಗಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಶೋಧದ ವೇಳೆ ಪರಾರಿಯಾಗಿದ್ದ ಸಂತೋಷ್ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಆತನನ್ನು ವಶಕ್ಕೆ ಪಡೆಯಲು ತೆರಳಿದ ಪೊಲೀಸರ ಮೇಲೆ ಆತ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೊದಲು ಎಚ್ಚರಿಕೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಆತ ಶರಣಾಗದ ಕಾರಣ ಆತ್ಮರಕ್ಷಣೆಗಾಗಿ ಬಲಗಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್‌.ಡಿ. ಹಾಗೂ ಡಿಸಿಪಿ ಶಾಲೂ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ಕೈದಿಗೆ ಚಿಕಿತ್ಸೆ ನೀಡಲಾಗಿದ್ದು, ಪೊಲೀಸ್ ಭದ್ರತೆಯಲ್ಲಿ ಇರಿಸಲಾಗಿದೆ.

ಇದೇ ವೇಳೆ ಪರಾರಿಯಾಗಿರುವ ಉಳಿದ ಇಬ್ಬರು ಕೈದಿಗಳ ಪತ್ತೆಗೆ ಮೂರು ಜಿಲ್ಲೆಗಳ ಪೊಲೀಸ್ ತಂಡಗಳು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದು, ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ತಪಾಸಣೆ ನಡೆಸಲಾಗುತ್ತಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರವೇಶಾತಿಗೆ ಅರ್ಜಿ ಆಹ್ವಾನ; ಜುಲೈ.31 ಕೊನೆಯ ದಿನ

ಕೇಂದ್ರ ಕಾರಾಗೃಹದ ಗೋಡೆ ಹಾರಿ ಮೂವರು ಕೈದಿಗಳು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...