ಕಲಬುರಗಿ| ಬಸನಗೌಡ ಪಾಟೀಲ ಯತ್ನಾಳರನ್ನು ಶಾಸಕ ಸ್ಥಾನದಿಂದ ಉಚ್ಚಾಟಿಸಿ: ಜಾಗತಿಕ ಲಿಂಗಾಯತ ಮಹಾಸಭಾ

Date:

ಬಸವಣ್ಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

- Advertisement -

ಬೀದರ್‌ನಲ್ಲಿ ಯತ್ನಾಳ್ ನೀಡಿರುವ ಹೇಳಿಕೆ ಖಂಡಿಸಿ ಕಲಬುರಗಿಯ ಪ್ರತಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡ ಅಶೋಕ ಘೂಳಿ, “ಶಾಸಕ ಯತ್ನಾಳ್ ಅವರು ವಕ್ಫ್ ಬೋರ್ಡ್ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆದರೆ ಅವರು ಪ್ರತಿನಿಧಿಸುವ ವಿಜಯಪುರ ಕ್ಷೇತ್ರವೇ ಬಸವಣ್ಣನವರ ಜನ್ಮಭೂಮಿಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಸವಣ್ಣನವರ ಪ್ರಭಾವಕ್ಕೆ ಒಳಗಾಗಿ ಇವರಿಗೆ ಬಸನಗೌಡ ಎಂದು ನಾಮಕರಣ ಮಾಡಲಾಗಿದೆ. ಯಾವ ಧರ್ಮದಲ್ಲಿ ಇವರು ಜನ್ಮ ತಾಳಿದ್ದರೋ ಅದರ ಧರ್ಮದ ಸಂಸ್ಕೃತಿ, ಅರಿವು ಇಲ್ಲದೆ ಮತ್ತು ಅಧ್ಯಯನ ಮಾಡದೆ ಬಸವಣ್ಣನವರು ಧಿಕ್ಕರಿಸಿ ಬಂದ ವೈಧಿಕ ಧರ್ಮದ ಪ್ರತಿನಿಧಿಯಾಗಿ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇದನ್ನು ಓದಿದ್ದೀರಾ? ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟ ನಿಲ್ಲಲ್ಲ: ಬಸನಗೌಡ ಪಾಟೀಲ್‌ ಯತ್ನಾಳ ಸ್ಪಷ್ಟನೆ

“ಇಡಿ ವಿಶ್ವದ ಅನೇಕ ರಾಷ್ಟ್ರಗಳು ಬಸವಣ್ಣನವರ ತತ್ವಗಳಿಗೆ ಮಾರುಹೋಗಿ ತತ್ವವನ್ನು ಅನುಷ್ಠಾನಗೊಳಿಸುತ್ತಿರುವಾಗ ಧರ್ಮದ ಗಂಧ ಗಾಳಿಯೂ ಅರಿಯದೆ ಸ್ವಾರ್ಥ ರಾಜಕಾರಣಕ್ಕಾಗಿ ಸ್ವಾಭಿಮಾನವನ್ನು ಮರೆತು ದೀಪದ ಕೆಳಗೆ ಕತ್ತಲು ಎನ್ನುವಂತೆ ಬಸವಣ್ಣನವರ ಮರಣದ ಬಗ್ಗೆ ಹಗುರವಾಗಿ ಹೇಳಿಕೆ ನೀಡಿರುವ ಅಜ್ಞಾನಿ ಬಸನಗೌಡ ಪಾಟೀಲ ಯತ್ನಾಳ್ ಅರವರನ್ನು ಶಾಸಕ ಸ್ಥಾನದಿಂದ ಉಚ್ಚಾಟನೆ ಮಾಡಬೇಕು” ಎಂದು ಆಗ್ರಹಿಸಿದರು.

“ಬಹು ಸಂಖ್ಯಾತರಾಗಿರುವ ಬಸವಣ್ಣನವರ ಅನುಯಾಯಿಗಳಿಗೆ ಇವರ ಹೇಳಿಕೆಯಿಂದ ನೋವುಂಟಾಗಿದೆ. ಸಮಾಜದಲ್ಲಿ ಶಾಂತಿ ಕದಡಿದ್ದು ದಂಗೆ ಏಳುವ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಕಾನೂನು ಪ್ರಕಾರವಾಗಿ ಯತ್ನಾಳ್ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು” ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟ್ಟಿಗಾರ್, ಅಧ್ಯಕ್ಷ ಭಧುಲಿಂಗ ಮುಂದರ, ಪ್ರಭುಲಿಂಗ ಮಹಾಗಾಂವಕರ್, ಸಂಗಮೇಶ ಗುಬ್ಬೇವಾಡ, ಶಶಿಕಾಂತ ಪಸಾರ್, ಹಣಮಂತ ರಾವ್ ಪಾಟೀಲ್, ಅಂಬಾರಾಯ ಬಿರಾದಾರ್, ಮಹಾಂತೇಶ ಕಲಬುರಗಿ, ಐಯನಗೌಡ ಪಾಟೀಲ್, ಎಸ್.ವಿ ನಿಂಗಪ್ಪ, ಶಾಂತಪ್ಪಾ ಪಾಟೀಲ್, ಬಸವರಾಜ ಕೋಣನ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...