ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

Date:

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ ಕರ್ನಾಟಕ ರಾಜ್ಯ ನಾಟಕ ಬರಹಗಾರರ (ಕವಿಗಳ) ಸಂಘ, ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

- Advertisement -

ಶ್ರೀಧರ ವಗ್ಗಿ ಅವರು ಬಾಲ್ಯದಿಂದಲೇ ನಾಟಕ, ಬಯಲಾಟ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಕಲಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. 2018ರಲ್ಲಿ ಸ್ವಗ್ರಾಮದ ಜಾತ್ರೆಯಲ್ಲಿ ಪ್ರದರ್ಶನಗೊಂಡ ‘ಧನಿಕರ ದೌರ್ಜನ್ಯ’ ಸಾಮಾಜಿಕ ನಾಟಕದಲ್ಲಿ ‘ರಮೇಶ’ ಪಾತ್ರದ ಮೂಲಕ ರಂಗಭೂಮಿಗೆ ಪ್ರವೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

2020ರಿಂದ ಶ್ರೀ ಶಂಕರಜಿ ಹೂವಿನ ಹಿಪ್ಪರಗಿ, ಶಾಮರಾವ ಕೊರವಿ ಹಾಗೂ ಸಂತೋಷ ಖನ್ನ ಅವರ ಮಾರ್ಗದರ್ಶನದಲ್ಲಿ ರಂಗಮಿತ್ರ ನಾಟ್ಯ ಸಂಘ, ಕಲಬುರಗಿ ಹಾಗೂ ಹಾರಕೂಡ ಶ್ರೀ ಚನ್ನಬಸವೇಶ್ವರ ನಾಟ್ಯ ಸಂಘ, ಚಿಂಚೋಳಿ ಸೇರಿದಂತೆ ವಿವಿಧ ನಾಟ್ಯ ಸಂಘಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರಾಜ್ಯದ ಹಲವು ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ನೂರಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

‘ಮಾನವಂತರ ಮನೆತನ’, ‘ಕರ್ತವ್ಯದ ಕಣ್ಮಣಿ’, ‘ತಾಳಿ ಹರಿಯಲಿಲ್ಲ ಶೀಲಾ ಉಳಿಯಲಿಲ್ಲ’, ‘ಜಮೀನ್ದಾರರ ಮನೆತನ’, ‘ಜೈ ಜವಾನ್ ಜೈ ಕಿಸಾನ್’, ‘ದ್ವೇಷ ಅಳಿಸಬೇಕು ದೇಶ ಉಳಿಸಬೇಕು’, ‘ನಂಬಿಕೆ ಸುಳ್ಳಾಯಿತು’, ‘ಎಚ್ಚರ ತಂಗಿ ಎಚ್ಚರ’ ಸೇರಿದಂತೆ ಹಲವು ನಾಟಕಗಳಲ್ಲಿನ ಅಭಿನಯ ಗಮನ ಸೆಳೆದಿದೆ. ಅವರ ರಂಗಭೂಮಿ ಸೇವೆಯನ್ನು ಗುರುತಿಸಿ ಈಗಾಗಲೇ ‘ರಂಗ ತಪಸ್ವಿ’ ಹಾಗೂ ‘ರಂಗ ಸಿರಿ’ ಪ್ರಶಸ್ತಿಗಳು ಲಭಿಸಿವೆ.

ಇದನ್ನು ಓದಿದ್ದೀರಾ? ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

‘ಕರ್ನಾಟಕ ರಾಜ್ಯ ನಾಟಕ ಬರಹಗಾರರ (ಕವಿಗಳ) ಸಂಘ, ಬೆಂಗಳೂರು ಹಾಗೂ ಜಿಲ್ಲಾ ಶಾಖೆ ಧಾರವಾಡದ ಸಂಯುಕ್ತ ಆಶ್ರಯದಲ್ಲಿ ಅ.4ರಂದು ಧಾರವಾಡದಲ್ಲಿ ನಡೆಯಲಿರುವ ಕವಿ ಸಂಗಮ ಕಾರ್ಯಕ್ರಮದಲ್ಲಿ ಶ್ರೀಧರ ವಗ್ಗಿ ಅವರಿಗೆ ‘ಕಲಾ ತಪಸ್ವಿ’ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...