ಕಲಬುರಗಿ | ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ; ಶ್ವಾನದಳದಿಂದ ಶೋಧ ಕಾರ್ಯಾಚರಣೆ

Date:

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಪರ್ಯಾಯ ವ್ಯಾಜ್ಯಗಳ ಪರಿಹಾರ ಕೇಂದ್ರಕ್ಕೆ ಬಾಂಬ್ ಇರಿಸಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

- Advertisement -

ಬೆದರಿಕೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಸುರಕ್ಷತಾ ಕ್ರಮವಾಗಿ ಕಟ್ಟಡದಿಂದ ಹೊರಗೆ ಸ್ಥಳಾಂತರಿಸಲಾಯಿತು. ಬಳಿಕ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಿಬ್ಬಂದಿ ನ್ಯಾಯಾಲಯದ ಆವರಣ ಮತ್ತು ಕಟ್ಟಡಗಳಲ್ಲಿ ಸಮಗ್ರ ತಪಾಸಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹಲವು ಗಂಟೆಗಳ ಕಾಲ ನಡೆದ ಶೋಧ ಕಾರ್ಯದಲ್ಲಿ ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿತು.

ಈ ಕುರಿತು ಪ್ರತಿಕ್ರಿಯಿಸಿದ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಂಪೂರ್ಣ ತಪಾಸಣೆ ನಡೆಸಲಾಗಿದೆ. ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಬೆದರಿಕೆ ಇ-ಮೇಲ್ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ; ನ್ಯಾಯಾಲಯ ಸೇರಿ ಜಿಲ್ಲಾಡಳಿತ ಭವನದಲ್ಲಿ ತೀವ್ರ ತಪಾಸಣೆ

ಗಮನಾರ್ಹವಾಗಿ, ಇದೇ ವರ್ಷದ ಮಾರ್ಚ್ 3ರಂದು ಸಹ ಜಿಲ್ಲಾ ನ್ಯಾಯಾಲಯಕ್ಕೆ ಇದೇ ರೀತಿಯ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಆಗಲೂ ಸಮಗ್ರ ತಪಾಸಣೆಯ ಬಳಿಕ ಅದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...