ಕಲಬುರಗಿ ನಗರದ ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ವಿಷಯ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿನಿಯನ್ನು ಬೃಹ್ಮಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಂಪೂರ್ಣ ಪಾಟೀಲ್ ಬಂಧಿತ ಅಭ್ಯರ್ಥಿ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿ ಅರ್ಚನಾ ಕಾಂಬಳೆ ಎಂಬುವವರ ಬದಲಾಗಿ ಕಾನೂನು ವಿದ್ಯಾರ್ಥಿನಿ ಸಂಪೂರ್ಣ ಪಾಟೀಲ್ ಅವರು ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆಯಲು ಬಂದಿದ್ದರು. ಈ ಕುರಿತು ಸಂಘಟನೆಯೊಂದು ಅಕ್ರಮವನ್ನು ಪ್ರಶ್ನಿಸಿದಾಗ ಇದು ಬಯಲಾಗಿದೆ.
ಅಭ್ಯರ್ಥಿಯನ್ನು ವಶಕ್ಕೆ ಪಡೆದ ಪೋಲಿಸರು ವಾಹನದಲ್ಲಿ ಕರೆದೊಯ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.