ಕಲಬುರಗಿ | ಕೌಟುಂಬಿಕ ಕಲಹ: ತಂದೆ, ಮಗಳ ಸಾವು, ನಾಲ್ವರಿಗೆ ಗಂಭೀರ ಗಾಯ

Date:

ಪತ್ನಿಯ ಮೇಲೆ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿದ ಪತಿಯೊಬ್ಬ ಬ್ಲಾಸ್ಟಿಂಗ್ ಮದ್ದನ್ನು ದೇಹಕ್ಕೆ ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಅವರ 15 ವರ್ಷದ ಪುತ್ರಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಮಂಗಳವಾರ ನಡೆದಿದೆ.

- Advertisement -

ಮಟಕಿ ತಾಂಡಾ ನಿವಾಸಿ ಶಿವಲಾಲ್ ಬಲಿರಾಮ ರಾಠೋಡ (49) ಹಾಗೂ ಅವರ ಪುತ್ರಿ ವೀರಾ ಶಿವಲಾಲ್ ರಾಠೋಡ (15) ಮೃತಪಟ್ಟವರು. ಸ್ಫೋಟದಲ್ಲಿ ಶಿವಲಾಲ್ ಅವರ ಪತ್ನಿ ಸವಿತಾ (40), ಪುತ್ರ ಪ್ರಕಾಶ (19), ಸಂಬಂಧಿಕರಾದ ಸುರೇಖಾ ಚವ್ಹಾಣ (30) ಹಾಗೂ ಅವರ ಪುತ್ರ ವಿವೇಕ ಚವ್ಹಾಣ (12) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕೌಟುಂಬಿಕ ವಿಚಾರವಾಗಿ ಶಿವಲಾಲ್ ಹಾಗೂ ಸವಿತಾ ನಡುವೆ ಹಲವು ವರ್ಷಗಳಿಂದ ಮನಸ್ತಾಪವಿದ್ದು, ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸವಿತಾ ಅವರು ಮಕ್ಕಳೊಂದಿಗೆ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಪುಣೆ ಸಮೀಪದ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಲಾಲ್, ಪತ್ನಿಯ ನಡವಳಿಕೆ ಕುರಿತು ಅನುಮಾನ ಹೊಂದಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಳಿಗ್ಗೆ ಸಂಬಂಧಿಕರ ಮನೆಗೆ ಬಂದ ಅವರು, ತಮ್ಮೊಂದಿಗೆ ತಂದಿದ್ದ ಸ್ಫೋಟಕವನ್ನು ದೇಹಕ್ಕೆ ಕಟ್ಟಿಕೊಂಡು ಸ್ಫೋಟಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಫೋಟದ ರಭಸಕ್ಕೆ ಶಿವಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪುತ್ರಿ ವೀರಾ ಕೂಡ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಫೋಟದಿಂದ ಮನೆಯ ಗೋಡೆಗಳಿಗೆ ಹಾನಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲೂ ಹಾನಿಯಾಗಿದೆ. ಭಾರೀ ಸದ್ದು ಕೇಳಿ ಸ್ಥಳೀಯರು ಆತಂಕಗೊಂಡಿದ್ದರು.

ಘಟನೆಯ ಮಾಹಿತಿ ದೊರೆತ ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸ್ಫೋಟಕದ ಸ್ವರೂಪ, ಅದು ಶಿವಲಾಲ್‌ಗೆ ಹೇಗೆ ದೊರೆಯಿತು ಹಾಗೂ ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ನಾಲ್ಕು ಕಾರ್ಮಿಕ ಸಂಹಿತೆ ರದ್ದುಪಡಿಸಲು ಆಗ್ರಹಿಸಿ ಜೈಲ್ ಭರೋ ಚಳುವಳಿ

ಘಟನೆ ಹಿನ್ನೆಲೆಯಲ್ಲಿ ಮಟಕಿ ತಾಂಡಾದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣ ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ...

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...