ಬಾಬಾ ಸಾಹೇಬ್ ಅಂಬೇಡ್ಕರ್ ಅವರು ‘ನನ್ನ ಜೀವನವೇ ನನ್ನ ಸಂದೇಶ’ ಎಂದು ಹೇಳಿದ್ದಾರೆ. ಅದೇ ರೀತಿಯಲ್ಲಿ ಎಲ್ಲ ವಿದ್ಯಾರ್ಥಿಗಳು ತಮ್ಮ ಜೀವನ ಜೊತೆಗೆ ನಮ್ಮ ಸಮಾಜದ ಏಳಿಗೆಗಾಗಿ ದುಡಿಯುವ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಡಾ. ಈಶ್ವರ್ ಕರಿಗೋಳಿ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಈಶ್‌ವರ್ ಕರಿಗೋಳಿ ಮಾತನಾಡಿದರು.
“ವಿದ್ಯಾರ್ಥಿಗಳು ಯಾವುದೇ ದುಷ್ಚಟಗಳಿಗೆ ತುತ್ತಾಗಬಾರದು. ಹಾಸ್ಟೆಲ್, ಕಾಲೇಜು ಸೌಲಭ್ಯಗಳನ್ನು ಒಳ್ಳೆಯ ರೀತಿಯಿಂದ ಉಪಯೋಗಿಸಬೇಕು” ಎಂದು ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ಹಾಸ್ಟೆಲ್‌ನ ಅಡುಗೆ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾನ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮೊನಮ್ಮ ಸುತಾರ, ಹಾಸ್ಟೆಲ್ ಮೇಲ್ವಿಚಾರಕ ಮಿಥುನ ವಾಲಿ, ಸಮಾಜ ಕಲ್ಯಾಣ ಇಲಾಖೆಯ ಜೇವರ್ಗಿ ಅಧೀಕ್ಷಕ ಸುರೇಶ ಪಾತ್ರೋಟ, ಕಲ್ಲೂರ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ ಕೂಡಲಗಿ ಸೇರಿದಂತೆ ಹಲವರು ಇದ್ದರು.
ವರದಿ: ಮಿಲಿಂದ್ ಸಾಗರ, ಸಿಟಿಜನ್ ಜರ್ನಲಿಸ್ಟ್, ಕಲಬುರಗಿ