ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Date:

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ 60 ವರ್ಷದ ರೈತರೊಬ್ಬರು ತಮ್ಮ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

- Advertisement -

ಮಂದೇವಾಲ ಗ್ರಾಮದ ಶಿವಶರಣಪ್ಪ ಪೀರಪ್ಪ ಸುಂಟಾಣ ಮೃತಪಟ್ಟ ರೈತ. ಕೃಷಿ ಹಾಗೂ ಕುಟುಂಬದ ನಿರ್ವಹಣೆಗಾಗಿ ಅವರು ಖಾಸಗಿ ವ್ಯಕ್ತಿಗಳಿಂದ ಸುಮಾರು 6 ಲಕ್ಷ ರೂಪಾಯಿ ಮತ್ತು ಎಸ್‌ಬಿಐ ಬ್ಯಾಂಕ್‌ನಿಂದ 2 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 8 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಯ ಸಂಕಷ್ಟದಿಂದ ತೀವ್ರವಾಗಿ ನೊಂದಿದ್ದ ಅವರು ಹೊಲದಲ್ಲಿ ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಮೃತ ರೈತ ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗನನ್ನು ಅಗಲಿದ್ದಾರೆ. ಕುಟುಂಬದ ಆಧಾರವಾಗಿದ್ದ ತಂದೆಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಸಾಲದ ಒತ್ತಡ ರೈತ ಕುಟುಂಬದ ಮೇಲೆ ಎಂತಹ ಪರಿಣಾಮ ಬೀರುತ್ತಿದೆ ಎಂಬುದಕ್ಕೆ ಈ ಘಟನೆ ಮತ್ತೊಂದು ನಿದರ್ಶನವಾಗಿದೆ.

ಘಟನೆಗೆ ಸಂಬಂಧಿಸಿದಂತೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು

ಒಂದೇ ವಾರದಲ್ಲಿ ಮೂವರು ರೈತರ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಚಿಂಚೋಳಿ, ಆಳಂದ ಮತ್ತು ಜೇವರ್ಗಿ ತಾಲೂಕುಗಳಲ್ಲಿ ತಲಾ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿಯಾಗಿವೆ. ಕೃಷಿ ಸಂಕಷ್ಟ, ಸಾಲದ ಹೊರೆ ಮತ್ತು ರೈತ ಕುಟುಂಬಗಳ ಆರ್ಥಿಕ ಅಸ್ಥಿರತೆ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ರೈತರ ಬದುಕಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳ ಅಗತ್ಯವನ್ನು ಈ ಘಟನೆಗಳು ಎತ್ತಿ ತೋರಿಸಿವೆ.

WhatsApp Image 2026 05 02 at 12.01.27 e1777704270988
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ...

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ...