ಕಲಬುರಗಿ | ನರನಾಳ ಗ್ರಾಮದ ರೈತ ಆತ್ಮಹತ್ಯೆ

Date:

ಒಂದು ಎಕರೆ ಮೂವತ್ತು ಗುಂಟೆ ಹೊಲದಲ್ಲಿ ತೊಗರಿ ಬೆಳೆದಿದ್ದು, ಸಾಲ ಭಾದೆಯಿಂದಾಗಿ ಹೊಲದಲ್ಲಿ ವಿಷ ಕುಡಿದು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನರನಾಳ ಗ್ರಾಮದಲ್ಲಿ ನಡೆದಿದೆ.

- Advertisement -

ಚಿಂಚೊಳಿ ತಾಲೂಕಿನ ನರನಾಳ ಗ್ರಾಮದ ನಿವಾಸಿ ರೈತ ನಾಗಪ್ಪ(40) ರೈತ ನವೆಂಬರ್ 6ರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ತಮ್ಮ ಸ್ವಂತ ಹೊಲದಲ್ಲಿ ವಿಷ ಕುಡಿದಿದ್ದು, ಅವರನ್ನು ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 8ರಂದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರೈತ ನಾಗಪ್ಪನವರ ತಂದೆ ಹೆಸರಿನಲ್ಲಿರುವ ಜಮೀನಿನಲ್ಲಿ ತೊಗರಿ ಬೆಳೆ ಬೆಳೆಯಲಾಗಿತ್ತು. ಅತಿವೃಷ್ಠಿಯಿಂದಾಗಿ ಉದ್ದು, ಹೆಸರು ಬೆಳೆ ಹಾನಿಯಾಗಿದೆ. ಧರ್ಮಸ್ಥಳ ಸಂಘ ಮತ್ತು ಎಲ್‌ಎಂಟಿ ಸಂಘದಲ್ಲಿ ₹2 ಲಕ್ಷ ರೂಪಾಯಿ ಸಾಲ ಪಡೆದಿದ್ದರು.

ಸಾಲ ವಸೂಲಿಗಾಗಿ ದಿನ ಬೆಳಿಗ್ಗೆ ರೈತ ನಾಗಪ್ಪನ ಮನೆ ಮುಂದೆ ಧರಣಿ ಕುಳಿತು ರೈತನಿಗೆ ಮಾನಸಿಕ ಹಿಂಸೆ ಕೊಟ್ಟು ಅವಮಾನ ಮಾಡುತ್ತಿರುದ್ದ ಧರ್ಮಸ್ಥಳ ಮತ್ತು ಎಲ್‌ಎಂಟಿ ಸಂಘಗಳ ಕಿರುಕುಳದಿಂದ ಜಿಗುಪ್ಸೆಗೊಂಡು ಸಾಲದ ಭಾದೆ ತಾಳಲಾರದೆ ರೈತ ನಾಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

ಮೃತ ನಾಗಪ್ಪನಿಗೆ ಒಬ್ಬ ಪುತ್ರಿ(8), ಒಬ್ಬ ಪುತ್ರ(3)ನಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...