ಕಲಬುರಗಿ | ರಸಗೊಬ್ಬರ ತರಲು ಹೋದ ರೈತ ಶವವಾಗಿ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬ

Date:

ರಸಗೊಬ್ಬರ ಖರೀದಿಸಲು ಕಲಬುರಗಿ ನಗರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೂರು ದಿನಗಳ ಬಳಿಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಸಮೀಪ ನಡೆದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -

ಮೃತರನ್ನು ಹಾವನೂರು ಗ್ರಾಮದ ಶಿವಕುಮಾರ್ ಹೊಸಮನಿ (35) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಿವಕುಮಾರ್ ಅವರು ಜೂನ್ 30ರಂದು ಡಿಎಪಿ ರಸಗೊಬ್ಬರ ತರಲು ಕಲಬುರಗಿಗೆ ತೆರಳಿದ್ದರು. ಬಳಿಕ ಮನೆಗೆ ಮರಳದ ಕಾರಣ ಆತಂಕಗೊಂಡ ಕುಟುಂಬಸ್ಥರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಹುಡುಕಾಟ ನಡೆಯುತ್ತಿದ್ದ ವೇಳೆ ಜುಲೈ 3ರಂದು ಮಧ್ಯಾಹ್ನ ಹಾವನೂರು ಗ್ರಾಮದ ಸಮೀಪ ಶಿವಕುಮಾರ್ ಅವರ ಮೃತದೇಹ ಪತ್ತೆಯಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ, ಇದು ಸಹಜ ಸಾವು ಅಲ್ಲ, ಕೊಲೆ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಚಾಮನೂರು ಕೊಲೆ ಪ್ರಕರಣಕ್ಕೆ ನಾಲ್ಕು ವರ್ಷಗಳ ಬಳಿಕ ತೀರ್ಪು: ಯುವಕನಿಗೆ ಜೀವಾವಧಿ ಶಿಕ್ಷೆ

ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ಕಾರಣ ಸ್ಪಷ್ಟವಾಗುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...