ರೈತರಿಗೆ ಹೆಚ್ಚಿನ ದರದಲ್ಲಿ ಬೀಜ ವಿತರಿಸಿ ವಂಚಿಸಿದ ಆಳಂದ ತಾಲ್ಲೂಕಿನ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಕೇಂದ್ರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.
ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ತಾಂಬೆ ಗುರುವಾರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸಮದ್ ಪಟೇಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
‘ರೇವಣಸಿದ್ದೇಶ್ವರ ಆಗ್ರೋ ಏಜೆನ್ಸಿಯಲ್ಲಿ ರೈತರಿಗೆ ಬೇಕಾದಂತಹ ಯೂರಿಯಾ, ಡಿಎಪಿಯನ್ನು ಮೂಲ ದರಕ್ಕಿಂತ ಅಧಿಕ ದರದಲ್ಲಿ ಮಾರಾಟ ಮಾಡಿ ರೈತರಿಗೆ ವಂಚಿಸಿದ್ದಾರೆ. ಈ ಬಗ್ಗೆ ಸಾಕ್ಷ್ಯಧಾರ ವಿಡಿಯೊ ಸೆರೆ ಹಿಡಿಯಲಾಗಿದೆ. ಹೀಗಾಗಿ ಕೂಡಲೇ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
‘ರೈತ ಸಂಘಟನೆಯು ಕ್ರಮ ಜರುಗಿಸಲು ಮೂರು ದಿನಗಳ ಕಾಲಾವಕಾಶ ನೀಡುತ್ತಿದೆ. ಒಂದು ವೇಳೆ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಸ್ಟೇಷನ್ ಗಣಗಾಪುರ ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತ ಸಂಘಟನೆಯಿಂದ ಕೃಷಿ ಇಲಾಖೆ ಕಚೇರಿ ಎದುರು ಹೋರಾಟ ಮಾಡಲಾಗುವುದುʼ ಎಂದರು.
ಇದನ್ನೂ ಓದಿ : ಬೀದರ್ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್