ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

Date:

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆ ಉದ್ದೇಶಿಸಿ ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ‘ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಕಾನೂನು ಮಾನ್ಯತೆ ನೀಡಬೇಕು, ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕು ಹಾಗೂ ವೈಜ್ಞಾನಿಕವಾಗಿ ಬರ ಪರಿಹಾರ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

‘ರಾಜ್ಯದಲ್ಲಿ ಭೀಕರ ಬರದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ತಾಲೂಕುಗಳಲ್ಲಿ ಬಿತ್ತನೆ ಸಾಧ್ಯವಾಗಿಲ್ಲ. ಬಿತ್ತನೆಯಾದ ಪ್ರದೇಶಗಳಲ್ಲಿಯೂ ಮಳೆ ಕೊರತೆ ಹಾಗೂ ತೀವ್ರ ಬಿಸಿಲಿನಿಂದ ಬೆಳೆಗಳು ಒಣಗಿವೆ. ಬೋರ್‌ವೆಲ್‌ಗಳು, ಬಾವಿಗಳು ಬತ್ತಿದ್ದು, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಒಣಗುವ ಹಂತ ತಲುಪಿವೆ. ಇದರಿಂದ ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ’ ಎಂದು ಆರೋಪಿಸಿದರು.

‘ರೈತರಿಗೆ ಕೇವಲ ₹2,500 ಪರಿಹಾರ ಘೋಷಿಸಿರುವುದು ಕೃಷಿ ವೆಚ್ಚಕ್ಕೂ ಸಾಲುವುದಿಲ್ಲ. ಬಿತ್ತನೆ, ಗೊಬ್ಬರ, ಬೀಜ, ಕೂಲಿ ಸೇರಿದಂತೆ ಕೃಷಿ ವೆಚ್ಚ ಗಣನೀಯವಾಗಿ ಹೆಚ್ಚಿರುವ ಸಂದರ್ಭದಲ್ಲಿ ಸರ್ಕಾರದ ಪರಿಹಾರವು ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ತೊಗರಿ, ಕಬ್ಬು, ಈರುಳ್ಳಿ ಹಾಗೂ ಹತ್ತಿ ಬೆಳೆಗಳ ಪ್ರತಿ ಎಕರೆ ಕೃಷಿ ವೆಚ್ಚದ ವಿವರಗಳನ್ನು ಮುಂದಿಟ್ಟ ರೈತ ಸಂಘ, ಬೆಳೆವಾರು ವೈಜ್ಞಾನಿಕವಾಗಿ ನಷ್ಟ ಅಂದಾಜಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿತು. ಬರ ಘೋಷಣೆ ಮಾಡಿದ ಬಳಿಕ ಪರಿಹಾರ ವಿತರಿಸುವಲ್ಲಿ ವಿಳಂಬ ಮಾಡದೆ ತಕ್ಷಣವೇ ಪ್ರತಿ ಎಕರೆಗೆ ₹5 ಸಾವಿರ ಬರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿತು.

‘ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ ಅಗತ್ಯ ನೆರವು ಬಿಡುಗಡೆ ಮಾಡಬೇಕು. ರೈತರ ಆತ್ಮಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಗೌರವಾಧ್ಯಕ್ಷ ಉಮಾಪತಿ ಪಾಟೀಲ, ಯುವ ಅಧ್ಯಕ್ಷ ಕರೆಪ್ಪ ಕರಗೊಂಡ, ಸಹ ಕಾರ್ಯದರ್ಶಿ ದಿಲೀಪ್ ನಾಗೂರೆ, ಉಪಾಧ್ಯಕ್ಷ ಭೀಮಶಾ ಬಡದಾಳ ಸೇರಿದಂತೆ ಗುಂಡಪ್ಪ ಅರಳಕಲ್, ರವೀಂದ್ರ ಪಾಟೀಲ, ದೇವು ಬಿರಾದಾರ್, ಚಂದಪ್ಪ ಪೂಜಾರಿ, ಸಾಯಬಣ್ಣ ಹೊರಬಾ, ಗೋವಿಂದ ರಾಠೋಡ್, ಶರಣಬಸಪ್ಪ ಪೂಜಾರಿ, ಶರಣಗೌಡ ಪಾಟೀಲ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...