ಕಲಬುರಗಿ | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವಂತೆ ರೈತರ ಆಗ್ರಹ

Date:

ಸಕ್ಕರೆ ಇಳುವರಿಯಲ್ಲಿ ಮೊಸ ಮಾಡುತ್ತಿರುವ ಸಕ್ಕರೆ ಕಾರ್ಖಾನೆಗಳು ಸರ್ಕಾರವೇ ರಚಿಸಿದ ಸಕ್ಕರೆ ಇಳುವರಿಯನ್ನು ಪ್ರತಿ 15 ದಿನಕ್ಕೊಮ್ಮೆ ತೆಗೆಯಬೇಕೆಂದು ಸರ್ಕಾರದ ಆದೇಶವಿದ್ದರೂ ಕ್ಯಾರೆ ಎನ್ನದ ಸಮಯದಲ್ಲಿ ಸರ್ಕಾರವೇ ರಚಿಸಿದ ಸಮಿತಿ ತಹಶೀಲ್ದಾರರು, ಫುಡ್‌ ಡಿಡಿ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಹಾಗೂ ರೈತರ ಸಮ್ಮುಖದಲ್ಲಿ ಸಕ್ಕರೆ ಇಳುವರಿ ತೆಗೆಯಬೇಕು. ಆದರೆ ರೈತರಿಗೆ ಹೇಳದೆ ಕೇಳದೆ ಯಾರಿಗೂ ಗೊತ್ತಾಗದಂತೆ ರೈತರಿಗೆ ಸಕ್ಕರೆ ಇಳುವರಿಯಲ್ಲಿ ಮೊಸ ಉಂಟಾಗುತ್ತಿರುವುದನ್ನು ರಾಜ್ಯ ಸರ್ಕಾರ ಕಣ್ಣುತೆರೆದು ನೋಡಿ, ಸಕ್ಕರೆ ಕಾರ್ಖಾನೆಗಳಿಂದ ರೈತರ ಮೇಲೆ ದಾಳಿಯಾಗುತ್ತಿರುವುದನ್ನು ತಡೆಗಟ್ಟಬೇಕು ಎಂದು ಕಬ್ಬು ಬೆಳೆಗಾರರು ಒತ್ತಾಯಿಸಿದ್ದಾರೆ.

- Advertisement -

ಕಲಬುರಗಿ ನಗರದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಬ್ಬು ಬೆಳೆಗಾರರು, “ಕಬ್ಬಿಗೆ ಬೆಂಬಲ ಬೆಲೆ ಮತ್ತು ಕಟಿಂಗ್ ಚಾರ್ಜ್ ನಿಗದಿ ಮಾಡಿ‌, ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಲಿ, ಬೆಳಗಾವಿ ಮಾದರಿಯಲ್ಲಿ ಕಬ್ಬು ಬೆಳೆಗೆ ಬೆಂಬಲ ಬೆಲೆ ಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಕಬ್ಬು ಕಟಿಂಗ್ ಚಾರ್ಜ್ ಮತ್ತು ಸಾಗಾಣಿಕೆ ಚಾರ್ಜ್‌ನಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡಿರುವುದು ಕಬ್ಬು ಬೆಳೆಗಾರರಿಗೆ ಬರೆ ಎಳೆದಂತಾಗುತ್ತಿದೆ. ಕಲಬುರಗಿ ಜಿಲ್ಲೆ ತೊಗರಿ ನಾಡು ಎಂಬ ಕೀರ್ತಿಗೆ ಪಾತ್ರವಾದಂತೆ, ಇತ್ತಿಚೆಗೆ ಸಿಹಿ ಬೆಳೆದು ಕಹಿ ಉಣ್ಣುವ ಕಬ್ಬು ಬೆಳೆಗಾರರು ಕಬ್ಬಿನ ಮೇಲೆ ಅವಲಂಬಿತರಾಗಿದ್ದು, ಅವರ ಸ್ಥಿತಿ ʼಮಂಡಿಯುದ್ದ ಕಬ್ಬು, ಎದೆಯುದ್ದ ಸಾಲʼ ಎಂಬ ಅಪಕೀರ್ತಿಗೂ ಪಾತ್ರವಾಗಿದೆ. ಕೃಷಿ ಕಾಯಕ ಮಾಡುವುದು ಹಿರಿಮೆಯ ಸಂಕೇತ ಎಂಬ ಭಾವನೆ ಕಣ್ಮರೆಯಾಗಿ ಶಾಪವಾಗಿ ಪರಿಣಮಿಸಿದೆ. ಇದರಿಂದಾಗಿ ರೈತರ ಆತ್ಮಹತ್ಯೆಯೂ ನಿಂತಿಲ್ಲ. ಜತೆಗೆ ಕೃಷಿ ಮಾಡುವ ಯುವ ರೈತರಿಗೆ ಉತ್ತಮ ಜೀವನ ನಡೆಸುವ ಭರವಸೆ ಇಲ್ಲವೆಂಬ ಕಾರಣಕ್ಕೆ ಯುವತಿಯರು ಮದುವೆಯಾಗಲು ಮುಂದೆ ಬರುತ್ತಿಲ್ಲ. ಹಾಗಾಗಿ ನಾವು ನಮ್ಮ ಬೆವರಿನ ಪಾಲನ್ನು ಬಂಡವಾಳಕ್ಕೆ ತಕ್ಕ ಪ್ರತಿಫಲವನ್ನು ನಿರೀಕ್ಷೆ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಸಕ್ಕರೆ ಉತ್ಪಾದನೆಯಲ್ಲಿ ಬ್ರೆಜಿಲ್ ನಂತರ ಭಾರತ ಎರಡನೇ ಸ್ಥಾನದಲ್ಲಿದೆ. ಅದೇ ರೀತಿ ದೇಶದಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಸುಮಾರು 5 ಕೋಟಿ ಮಂದಿ ಕಬ್ಬು ಬೆಳೆಗಾರರು ದೇಶದಲ್ಲಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ₹45,000 ಹೆಕ್ಟೇರ್ ಕಬ್ಬು ಬೆಳೆಯಲಾಗಿದೆ. ಇಂತಹ ಸಂದರ್ಭದಲ್ಲಿ ಒಂದು ಟನ್ ಕಬ್ಬು ಬೆಳೆಯಲು ಸುಮಾರು 3,500 ರೂಪಾಯಿ ಖರ್ಚು ಬರುತ್ತಿದೆ. ಡಾ. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಲೆ ನಿಗದಿಪಡಿಸಿದರೆ ಟನ್‌ಗೆ 5000 ರೂಪಾಯಿಗೂ ಹೆಚ್ಚು ಬೆಲೆ ನೀಡಬೇಕು. ಆದರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ 2023-24ನೇ ಸಾಲಿಗೆ ಒಂದು ಕೆಜಿ ಕಬ್ಬಿಗೆ 1 ಪೈಸೆ, ಕ್ವಿಂಟಾಲ್‌ಗೆ 10 ರೂ, ಟನ್‌ಗೆ 150 ರೂಪಾಯಿಗಳನ್ನು ಮಾತ್ರ ಬೆಂಬಲ ಬೆಲೆ ಹೆಚ್ಚಳ ಮಾಡಿರುವುದು ರೈತ ಕುಲಕ್ಕೆ ಮಾಡಿದ ಅವಮಾನವಾಗಿದೆ” ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಆರೋಪಿಸಿದೆ.

“ಇತ್ತೀಚಿನ ದಿನಗಳಲ್ಲಿ ರಸಗೊಬ್ಬರ, ಬಿತ್ತನೆ ಕಬ್ಬು, ಆಳಿನ ಕೂಲಿ, ಉಳುಮೆ ವೆಚ್ಚ ಸೇರಿದಂತೆ ಕಬ್ಬು ಬೆಳೆಯಲು ದುಬಾರಿ ಖರ್ಚು ಬರುತ್ತಿದೆ. ಗುಜರಾತ್‌ನಲ್ಲಿ ಟನ್ ಕಬ್ಬಿಗೆ 4,400 ರೂಪಾಯಿ, ಪಂಜಾಬ್‌ನಲ್ಲಿ 3,800 ರೂಪಾಯಿ, ಉತ್ತರ ಪ್ರದೇಶದಲ್ಲಿ 3,500 ರೂ.ಗಳು ಸೇರಿದಂತೆ ಬೆಳಗಾವಿಯ ಹಲವು ಕಾರ್ಖಾನೆಗಳೇ ಹೆಚ್ಚಾಗಿ ನೀಡುತ್ತಿವೆ. ಹಾಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಸುಪ್ರೀಂ ಕೋರ್ಟಿನ ಐವರು ನ್ಯಾಯಾಧೀಶರ ಪೀಠದ ಆದೇಶದಂತೆ ಎಎಪಿ ನಿಗದಿಪಡಿಸಲು ಅವಕಾಶ ನೀಡಿದೆ. ಅದನ್ನು ಬಳಸಿಕೊಂಡು ರಾಜ್ಯ ಸರ್ಕಾರ ಒಂದು ಟನ್ ಕಬ್ಬಿಗೆ 500 ರೂ.ಗಳ ಹೆಚ್ಚುವರಿ ಮೊತ್ತ ಘೋಷಣೆ ಮಾಡಬೇಕು. ಹಾಗಾಗಿ ಒಟ್ಟಾರೆ ಟನ್ ಕಬ್ಬಿಗೆ 5,000 ರೂಪಾಯಿ ಬೆಲೆ ನಿಗದಿಪಡಿಸಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ, ಕರ್ನಾಟಕ ಕಬ್ಬು ಖರೀದಿ ಮತ್ತು ಸರಬರಾಜು ನಿಯಂತ್ರಣ ಅಧಿನಿಯಮ-2013 ಹಾಗೂ ತಿದ್ದುಪಡಿ ಅಧಿನಿಯಮ-2014ರ ಕಲಂ 4(ಎ)ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದ ಎಥೆನಾಲ್ ಉತ್ಪಾದಿಸುವ ಮತ್ತು ಉತ್ಪಾದಿಸದೇ ಇರುವ ಎಲ್ಲ ಸಕ್ಕರೆ ಕಾರ್ಖಾನೆಗಳು 2022-23ರ ಎಫ್‌ಆರ್‌ಪಿ ಜತೆಗೆ ಪ್ರತಿ ಟನ್‌ಗೆ 1 ರೂಪಾಯಿಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಆದೇಶಿಸಿದೆ. ಅದರಂತೆ ಚಾಮುಂಡೇಶ್ವರಿ ಸಕ್ಕರೆ ಕಂಪನಿಯು ರೈತರಿಗೆ ಸುಮಾರು ಹತ್ತೂವರೆ ಕೋಟಿ ರೂಪಾಯಿ ಹಣವನ್ನು ನೀಡಬೇಕಾಗಿದೆ. ಕಬ್ಬು ಸರಬರಾಜು ಮಾಡಿ 2-3 ತಿಂಗಳಾದರೂ ಹಣ ನೀಡದೆ ವಿಳಂಬ ಮಾಡಿರುವ ಉದಾಹರಣೆಗಳುಂಟು. ಹಾಗಾಗಿ ಕಬ್ಬು ಸರಬರಾಜು ಮಾಡಿದ 14 ದಿನಗಳೊಳಗೆ ಹಣ ಪಾವತಿಮಾಡಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ರೀತಿ ವಿಳಂಬ ಮಾಡುತ್ತಿರುವ ಕಾರ್ಖಾನೆ ಆಡಳಿತ ಮಂಡಳಿ ಮೇಲೆ ಕಾನೂನು ಕ್ರಮ ಜರುಗಿಸಿ ಹಿಂದೆ ವಿಳಂಬವಾದ ಪಾವತಿಗೆ ನಿಯಮದ ಪ್ರಕಾರ ಶೇ.16 ರಷ್ಟು ಬಡ್ಡಿಯನ್ನು ರೈತರಿಗೆ ನೀಡುವಂತೆ ಕ್ರಮ ಕೈಗೊಳ್ಳಬೇಕು. ತೂಕದಲ್ಲಿ ಮತ್ತು ಸಕ್ಕರೆ ಇಳುವರಿಯಲ್ಲಿ ನ್ಯಾಯ ಸಮ್ಮತ ರೀಡಿಂಗ್ ಕಂಡುಬರುತ್ತಿಲ್ಲವೆಂಬ ಗುಮಾನಿ ಇದೆ. ಹಾಗಾಗಿ ತಜ್ಞರ ತಂಡ ರಚಿಸಬೇಕು” ಎಂದು ಆಗ್ರಹಿಸಿದರು.

ಬೇಡಿಕೆಗಳು
ಕಬ್ಬಿನ ಉಪ ಉತ್ಪನ್ನಗಳಾದ ಮೊಲಾಸಸ್, ಕಾಕಂಬಿ, ಎಥೆನಾಲ್, ಡಿಸ್ಟಿಲರಿಸ್, ಸಹವಿದ್ಯುತ್, ಬಯೋ ಕಾಂಪೋಸ್ಟ್, ಪಶು ಆಹಾರ, ಬಗಾಸ್ ಇತರೆ ಉತ್ಪನ್ನಗಳ ಲಾಭಾಂಶದಲ್ಲಿ ರೈತರಿಗೆ ಪಾಲು ನೀಡಬೇಕು. ಕಟಾವು ಮತ್ತು ಸಾಗಾಣಿಕ ವೆಚ್ಚಕ್ಕೆ ಸಂಬಂಧಪಟ್ಟಂತೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರ ನಡುವೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲು ಸಮಿತಿ ರಚಿಸಬೇಕು ಮತ್ತು ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು. ಕರ್ನಾಟಕ ಕಬ್ಬು ಖರೀದಿ ಮತ್ತು ಸರಬರಾಜು ನಿಯಂತ್ರಣ ಅಧಿನಿಯಮ 2013 ಹಾಗೂ ತಿದ್ದುಪಡಿ ಅಧಿನಿಯಮ 2014ರ ಕಲಂ 4(ಎ)ರಡಿ ಪ್ರದತ್ತವಾದ ಅಧಿಕಾರ ಬಳಸಿ ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಜೊತೆಗೆ ಹೆಚ್ಚುವರಿಯಾಗಿ ಕಬ್ಬಿಗೆ ಹೆಚ್ಚುವರಿ ಬೆಲೆ ನಿಗಧಿಪಡಿಸಲು ಅವಕಾಶವಿದೆ ಹಾಗಾಗಿ ಟನ್‌ಗೆ 5 ರೂ.ಗಳ ಬೆಲೆ ನಿಗದಿಪಡಿಸಿ, ಇಲ್ಲವೇ ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಟನ್‌ಗೆ 50 ರೂ. ಪ್ರೋತ್ಸಾಹ ಧನ ನೀಡಬೇಕು” ಎಂದು ಒತ್ತಾಯಿಸಿದರು.

“ಕೇಂದ್ರ ಸರ್ಕಾರ ಕಬ್ಬಿಗೆ 2023-24ನೇ ಸಾಲಿಗೆ ಎಫ್‌ಆರ್‌ಪಿ ದರವನ್ನು ಕೆಜಿಗೆ 10 ಪೈಸೆ, ಕ್ವಿಂಟಾಲ್‌ಗೆ 10 ರೂ, ಟನ್‌ಗೆ 100 ರೂಗಳು ಮಾತ್ರ ಹೆಚ್ಚಳ ಮಾಡಿರುವುದು ರೈತ ವಿರೋಧಿಯಾಗಿದ್ದು, ಇದನ್ನು ವಾಪಸ್ ಪಡೆದು ಒಟ್ಟಾರ ಟನ್‌ಗೆ 5,000 ರೂ ಬೆಲೆ ನಿಗದಿಪಡಿಸಬೇಕು. ಸಕ್ಕರೆ ಇಳುವರಿ ಘೋಷಣೆಯಲ್ಲಿ ದೋಷ ಕಂಡುಬರುತ್ತಿದ್ದು, ಕೃಷಿ ವಿಶ್ವವಿದ್ಯಾನಿಲಯ ಹಾಗೂ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ತಜ್ಞರ ಸಮಿತಿ ರಚಿಸಿ ನೈಜ ಇಳುವರಿ ಘೋಷಣೆ ಮಾಡಿ ಅದರಂತೆ ಬೆಲೆ ನಿಗದಿಪಡಿಸಬೇಕು.
ತೂಕದಲ್ಲಿ ಮೋಸ ಕಂಡುಬರುತ್ತಿದ್ದು, ಅದನ್ನು ತಡೆಗಟ್ಟಲು ಅಳತೆ ಮತ್ತು ತೂಕ ಮಾಪನ ಇಲಾಖೆಯ ಅಧಿಕಾರಿಗಳು
ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು. ನೋಂದಾಯಿತ ಕಬ್ಬು ಬೆಳೆಗಾರರ ಜೇಷ್ಠತೆ ಆಧಾರದ ಮೇಲೆ ಉಪವಿಭಾಗದ ಕಚೇರಿಯಲ್ಲಿ ಕಟಾವು ಅನುಮತಿಯನ್ನು ಪ್ರಕಟಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚನ್ನರಾಯಪಟ್ಟಣ ರೈತರ ಮೇಲೆ ಮತ್ತೆ ಕೆಐಎಡಿಬಿ ಸವಾರಿ?

“ಭೂಮಿಗೆ ಹೊಂದಿಕೊಳ್ಳುವ ಕಬ್ಬಿನ ತಳಿ ನಾಟಿ ಮಾಡಲು ರೈತನಿಗೆ ಮುಕ್ತ ಅವಕಾಶ ಇರಬೇಕು. ಎಥೆನಾಲ್ ಪ್ರಮಾಣವನ್ನು ಶೇ.25ಕ್ಕೆ ಹೆಚ್ಚಿಸಬೇಕು. ಪರ್ಮಿಟ್, ಕಟಾವು, ಸಾಗಾಣಿಕೆ ಸಂದರ್ಭದಲ್ಲಾಗುವ ತೊಂದರೆಯನ್ನು ನಿವಾರಿಸಬೇಕು. ದುಬಾರಿ ಕಟಾವು ಮತ್ತು ಸಾಗಾಣಿಕಾ ವೆಚ್ಚಕ್ಕೆ ಕಡಿವಾಣ ಹಾಕಬೇಕು. ರೈತರಿಗೆ ಮಡ್ಡಿ ಹಾಗೂ ಬೂದಿಯನ್ನು ಉಚಿತವಾಗಿ ನೀಡಬೇಕು” ಎಂದರು.

ಈ ವೇಳೆ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ, ರಾಜ್ಯ ಉಪಾಧ್ಯಕ್ಷ ಸಿದ್ದರಾಮ ದಣ್ಣೂರು, ಅಧ್ಯಕ್ಷ ಅಶೋಕ ಹೂಗಾರ, ದೇವು ಬಿರದ್ದಾರ, ದಿಲೀಪ ನಾಗೂರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...