ಕಲಬುರಗಿ | ಹಾಲಗಡ್ಡಾ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಉಪವಾಸ ಸತ್ಯಾಗ್ರಹ

Date:

ಜೇವರ್ಗಿ ತಾಲ್ಲೂಕಿನ ಹಾಲಗಡ್ಡಾ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಹಾಲಗಡ್ಡಾ ಹಾಗೂ ಹರನೂರ ಗ್ರಾಮದ ರೈತರು ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪ್ರತಿಭಟನೆಯಲ್ಲಿ ರೈತರು ಮಾತನಾಡಿ, ಜೇವರ್ಗಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಲ್ಲಿ ಸಚಿವ ಡಾ. ಅಜಯಸಿಂಗ್ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ರೈತರ ನೆರವಿಗೆ ಧಾವಿಸಬೇಕಾದ ಸರ್ಕಾರ ಕೆರೆಗಳಿಗೆ ನೀರು ತುಂಬಿಸುವ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಣ್ಣ ನೀರಾವರಿ ಸಚಿವರಾಗಿದ್ದರೂ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಚಿವ ಡಾ. ಅಜಯಸಿಂಗ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹಾಲಗಡ್ಡಾ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿ ಕಳಪೆಯಾಗಿದ್ದು, ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಚಿವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಹಾಲಗಡ್ಡಾ ಕೆರೆಗೆ ಕೂಡಲೇ ನೀರು ಹರಿಸುವ ಕ್ರಮ ಕೈಗೊಳ್ಳಬೇಕು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

ನಂತರ ರೈತರು ತಹಶೀಲ್ದಾರ್ ಅಂಜುಮ್ ತಬಸುಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸೆ.16ರಂದು ‘ಕಲ್ಯಾಣದಲ್ಲಿ ಕ್ಷೀರ ಕ್ರಾಂತಿ’

ಈ ಸಂದರ್ಭದಲ್ಲಿ ಸೋಮಣ್ಣಗೌಡ ಮಾಲಿಪಾಟೀಲ, ಸಂತೋಷ ಮಾಲಿಪಾಟೀಲ, ಬಸವರಾಜ ಹವಲ್ದಾರ, ನಾನಾಗೌಡ ಮಾಲಿಪಾಟೀಲ, ಭೀಮಣ್ಣಗೌಡ ಸಾಲೊಡಗಿ, ಶರಣಪ್ಪ ಠಣಕೇದಾರ, ಸಕ್ರೆಪ್ಪಗೌಡ ಹರನೂರ, ಶರಣು ಗೋಗಿ, ನಾಗಪ್ಪ ತಡಕಲ, ಸುರೇಶ ಕೋಬಾಲ, ಗೌಡಪ್ಪಗೌಡ ಮದ್ರಿಕಿ, ಶಿವರಾಜಗೌಡ, ಶಶಿಕಾಂತ ಕವಲ್ದಾರ, ರಮೇಶ ಬಡಿಗೇರ, ನಾಗಪ್ಪ ಪೂಜಾರಿ ಸೇರಿದಂತೆ ಹಾಲಗಡ್ಡಾ ಹಾಗೂ ಹರನೂರ ಗ್ರಾಮದ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...