ಕಲಬುರಗಿ | ಪಹಣಿಯಲ್ಲಿ ವಕ್ಫ್ ಹೆಸರು: ರೈತರಿಂದ ಪ್ರತಿಭಟನೆ

Date:

ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ 2012 ರಿಂದ 2016 ಎಂದು ನಮೂದು ಮಾಡಿರುವ ಹೆಸರುಗಳು ತಕ್ಷಣದಲ್ಲಿ ತೆಗೆಯಬೇಕು ಇಲ್ಲದಿದ್ದಲ್ಲಿ ನಿರಂತರವಾಗಿ ಹೋರಾಟಗಳನ್ನು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೋರಾಟಗಾರ ಜಗದೀಶ್ ಸಾಗರ್ ತಿಳಿಸಿದ್ದಾರೆ.

- Advertisement -

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಟೆಂಗಳಿ ಕ್ರಾಸ್ ಹತ್ತಿರ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ರೈತ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರಗಳು ರೈತರ ಹಿತಾಸಕ್ತಿಯ ಬಗ್ಗೆ ಯೋಚಿಸದೆ ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಿಸಿದೆ. ಬಡ ರೈತರ ಪಹಣಿಯಲ್ಲಿನ ವಕ್ಫ್ ಮಂಡಳಿಯ ಹೆಸರನ್ನು ತೆಗೆದು ಹಾಕಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಸಂಘಟನೆಯಿಂದ ರಾಜ್ಯಾದ್ಯಂತ ರಾಜ್ಯ ಮತ್ತು ರಾಷ್ಟ್ರ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ‌ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಚಿಂಚೋಳಿ ತಾಲೂಕಿನ ಸಿದ್ಧಸಿರಿ ಸಕ್ಕರೆ ಕಾರ್ಖಾನೆ ತಕ್ಷಣ ಪ್ರಾರಂಭಿಸಬೇಕು, ಜಿಲ್ಲಾದ್ಯಂತ ಅಕ್ರಮ ಮರಳುಗಾರಿಕೆ ತಡೆಹಿಡಿಯಬೇಕು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಜೆ.ಜೆ.ಎಮ್ ಕಾಮಗಾರಿ ತನಿಖೆ ಮಾಡುವ ಕುರಿತು, ಸರಕಾರಿ ಜಮೀನು ಅಕ್ರಮದಿಂದ ಸಕ್ರಮ ಮಾಡಬೇಕು, ಜಿಲ್ಲಾದ್ಯಂತ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಹಿಡಿಯಬೇಕು ಎಂಬ ಬೇಡಿಕೆಗಳನ್ನು ಉಲ್ಲೇಖಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ವಿಠಲ್ ಮಾಕಾ, ಜಿಲ್ಲಾ ಕಾರ್ಯದರ್ಶಿ ಪರಮೇಶ್ವರ್ ಝಳಕಿ, ಜಿಲ್ಲಾ ಸದಸ್ಯ ವಿಜಯಕುಮಾರ್ ಚೌವ್ಹಾಣ್, ತಾಲೂಕು ಅಧ್ಯಕ್ಷರಾದ ಶಿವಯೋಗಿ ಪೂಜಾರಿ, ಪರಮೇಶ್ವರ್ ಮತ್ತಿಮೂಡ್, ಮೆಹಬೂಬ ಪಟೇಲ್, ಮಲ್ಲಿಕಾರ್ಜುನ ಭೀಮನಳ್ಳಿಕರ್, ಮಕ್ಬೂಲ್ ಪಟೇಲ್, ಮರೆಪ್ಪಾ ನಿಡಗುಂದಾ, ಡಾ.ಸದಾಶಿವ, ಮಲ್ಲಿನಾಥ ಪೂಜಾರಿ, ರಾಮರಾವ್ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.

ವರದಿ: ಅನಂತ್ ದೇಶಪಾಂಡೆ, ವಾಲೆಂಟಿಯರ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...