ಕಲಬುರಗಿ | ನೀರಿಗಾಗಿ ರೈತರ ಪ್ರತಿಭಟನೆ; ರಸ್ತೆ ತಡೆದು ಆಕ್ರೋಶ

Date:

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಮತ್ತು ಬೇಸಿಗೆ ಬೆಳೆಗಳಿಗೆ ಅನುಕೂಲವಾಗುವಂತೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟಿಸಿರುವ ರೈತರು, ಕಲಬುರಗಿ ಜಿಲ್ಲಾಧಿಕಾರಿಗೆ ಬೇಡಿಕೆ ಪತ್ರ ಸಲ್ಲಿಸಿದರು.

- Advertisement -

ಆಲಮಟ್ಟಿ ಜಲಾಶಯದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಭಾಗವಾಗಿ ಹರಿಯುವ ನೀರನ್ನೇ ನಂಬಿರುವ ಜನರು ಕಂಗಾಲಾಗಿದ್ದಾರೆ. ಶೇಂಗಾ ಮತ್ತು ಕಬ್ಬು ಬೆಳೆಗಾರರು ಪರಿತಪಿಸುತ್ತಿದ್ದಾರೆ. ಕುಡಿಯುವ ನೀರಿಗೂ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಲಬುರಗಿ, ಅಫಜಲಪುರ ಮತ್ತು ಜೇವರ್ಗಿ ಭಾಗದ ಸರಿಸುಮಾರು 50 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ದನಕರುಗಳಿಗೆ, ಪ್ರಾಣಿಪಕ್ಷಿಗಳಿಗೆ ಬೇಸಿಗೆಯಲ್ಲಿ ಅನುಕೂಲವಾಗುವಂತೆ ಸೊನ್ ಬ್ಯಾರೇಜ್‌ನಿಂದ ಮತ್ತು ಆಲಮಟ್ಟಿ ಡ್ಯಾಮ್‌ನಿಂದ 2 ಟಿಎಂಸಿ ನೀರು ಹರಿಸಬೇಕು. ಮಹಾರಾಷ್ಟ್ರದ ಉಜ್ಜನಿ ಡ್ಯಾಮ್‌ನಿಂದ ನಮ್ಮ ನೀರಿನ ಪಾಲು ಕೊಡಬೇಕು. ಘಾಣಗಾಪುರ ದತ್ತಾತ್ರೇಯ ಕ್ಷೇತ್ರದ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ರಸ್ತೆ ತಡೆಯನ್ನೂ ಮಾಡಲಾಯಿತು.

ಪ್ರತಿಭಟನೆ ಉದ್ದೇಶಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, “ಈಗಾಗಲೇ ಕಲಬುರಗಿ ಜಿಲ್ಲೆಯ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬೆಳೆದ ಬೆಳೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸಾಲದ ಬಾಧೆ ತಾಳಲಾರದೆ ಸರಣಿ ರೈತರ ಆತ್ಮಹತ್ಯೆಯ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿವೆ. ರೈತರ ಒಕ್ಕಲುತನ ಬೀದಿಪಾಲಾಗುತ್ತಿವೆ. ಕೋಟಿ ವಿದ್ಯೆಗೆಗಿಂತ ಮೇಟಿ ವಿದ್ಯೆ ಮೇಲು ಎಂಬ ಗಾದೆಯ ಮಾತು ಹುಸಿಯಾಗಿದೆ. ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಸಂಪೂರ್ಣವಾಗಿ ನೆಲ ಕಚ್ಚಿ ಹೋಗಿದೆ. ಬೆಂಬಲ ಬೆಲೆ ಇಲ್ಲದೆ ಅನ್ನದಾತರು ನೇಣಿಗೆ ಶರಣಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮನ್ನು ಆಳುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ಬಗ್ಗೆ ತಿರುಗಿಯೂ ನೋಡುತ್ತಿಲ್ಲ. ಕಿಂಚಿತ್ತು ಕಾಳಜಿ ಇಲ್ಲದಂತಾಗಿದೆ. ಬರಿ ಮೊಸಳೆ ಕಣ್ಣೀರು ಸುರಿಸುತ್ತಿರುವ ರೈತ ವಿರೋಧಿ ನೀತಿ ಕೈ ಬಿಟ್ಟು ರೈತರ ನೆರವಿಗೆ ಧಾವಿಸಿ, ಇದ್ದ ಅಲ್ಪ ಸ್ವಲ್ಪ ಬೇಸಿಗೆ ನೀರಾವರಿ ಬೆಳೆಗಳಿಗೆ ನೀರು ಹರಿಸಬೇಕು. ಘಾಣಗಾಪುರ ದತ್ತ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆ ಹದಗೆಟ್ಟು ಗಬ್ಬು ನಾರುತ್ತಿದೆ. ಅನಿವಾರ್ಯವಾಗಿ ಗಲೀಜು ನೀರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

“ಆಲಮಟ್ಟಿ ಡ್ಯಾಮ್ ನಿಂದ ನಾರಾಯಣಪುರ ಹಾಗೂ ಕೃಷ್ಣಾ ಮೇಲ್ದಂಡೆ ಕಾಲುವೆ ಮೂಲಕ ಅಫಜಲಪುರ ತಾಲೂಕಿನ ಸೊನ್ ಬ್ಯಾರೆಜ್ ನಲ್ಲಿ ಸ್ಪೋಟರೆಜ್ ಮಾಡಲಾಗಿದೆ. ಈಗಾಗಲೇ 1.5 ಟಿ ಎಮ್ ಸಿ ನೀರು ಶೇಖರಣೆಯಾಗಿದ್ದು ನಂತರ ಘತ್ತರ್ಗಿಯಿಂದ ಘಾಣಗಾಪುರದವರೆಗೆ ನೀರು ಹರಿಸಬೇಕೆಂದು ರೈತರ ಒತ್ತಾಯವಾಗಿದೆ. ಬೇಸಿಗೆ ಬೆಳೆಗಳಾದ ಕಬ್ಬು ಮತ್ತು ಬೇಸಿಗೆ ಶೇಂಗಾಗೆ, ದನಕರುಗಳಿಗೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಮತ್ತು ಸಾರ್ವಜನಿಕ ಕುಡಿಯುವ ನೀರಿಗಾಗಿ ಸುಮಾರು 50 ಹಳ್ಳಿಗಳಿಗೆ ಈ ಡ್ಯಾಮ್ ಮೂಲಕ ನೀರು ಸರಬರಾಜು ಆಗುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ರೈತರ ಉಳಿವಿಗಾಗಿ ನೀರು ಬಿಡಬೇಕು” ಎಂದು ಸಾರ್ವಜನಿಕರು ಆಗ್ರಹಿಸಿದರು.

ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಈ ಸಂದರ್ಭದಲ್ಲಿ ಕೆಪಿಆರ್‌ಎಸ್‌ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದರಾಮ ಧಣ್ಣೂರು ಅಣ್ಣರಾವಗೌಡ ಪಾಟೀಲ್, ಅಶೋಕ ಹೂಗಾರ್, ಶಿವುರಾಯ ಪೂಜಾರಿ, ವಿಠಲ್ ಕಿರಸಾವುಸಳಗಿ, ಭೀಮಾ ಅಮರ್ಜಾ, ಭೀಮರಾವ್ ಪಾಟೀಲ್, ಶಿವರಾಯ ಚಿಂಚೋಳಿ, ಸಿದ್ದಪ್ಪ ಕಿರಸಾವುಳಿ, ಶ್ರೀಶೈಲ ಗೌಡ ಪಾಟೀಲ್, ದತ್ತಗುರು ಬಿದನೂರು, ಶಿವರಾಯ ದೊಡ್ಡಮನಿ, ಯಲ್ಲಪ್ಪಾ ಬಟಗೇರಿ, ಭೀಮರಾಯ, ಮಿಸ್ಮಾ ಶರಣಗೌಡ ಬಟಗೇರಿ, ಸುಭಾಷ್ ಹೊಸ ಮನಿ ದಿಲೀಪ್ ನಾಗೂರೆ ರಾಯಪ್ಪ ಹುರುಮುಂಜಿ ದೇವು ಬಿರಾದರ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...