ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ | ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

Date:

Advertisements

ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಯುವತಿ ಕವಿತಾ ಕೊಳ್ಳುರ (18) ಮರ್ಯಾದೆಗೇಡು ಹತ್ಯೆಯಾದ ಯುವತಿ. ಯುವತಿಯ ತಂದೆ ಶಂಕರ ಕೊಳ್ಳುರ ಹಾಗೂ ಇತರರು ಕೊಲೆಗೈದಿದ್ದು, ಯುವತಿ ತಂದೆ ಶಂಕರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಲಿಂಗಾಯತ ಸಮುದಾಯದ ಯುವತಿಯಾದ ಕವಿತಾ ಅದೇ ಗ್ರಾಮದ ಕುರುಬ ಜಾತಿಯ ಆಟೋ ಚಾಲಕನನ್ನು ಪ್ರೀತಿಸುತ್ತಿದ್ದಳು. ಪ್ರೀತಿಸುತ್ತಿದ್ದ ಯುವಕನನ್ನೇ ಮದುವೆ ಆಗುವೆ. ಇಲ್ಲಂದ್ರೆ ಮನೆ ಬಿಟ್ಟು ಹೋಗುವೆ’ ಎಂದು ಪಟ್ಟು ಯುವತಿ ಹಿಡಿದಿದ್ದಳು. ಈ ಕುರಿತು ಆ.27ರಂದು ಯುವತಿ ಹಾಗೂ ಕುಟುಂಬದ ನಡುವೆ ಮತ್ತೆ ಗಲಾಟೆ ನಡೆದಿತ್ತು.

‘ಮಗಳು ಬೇರೆ ಜಾತಿಯ ಯುವಕನ ಜೊತೆ ಹೋದರೆ, ಮರ್ಯಾದೆ ಹೋಗುತ್ತದೆ ಎಂದುಕೊಂಡು ತಂದೆ ಹಾಗೂ ಇತರ ಇಬ್ಬರು ಸೇರಿಕೊಂಡು ಯುವತಿಯ ಕತ್ತು ಹಿಸುಕಿ ಕೊಲೆಗೈದು, ನಂತರ ಯುವತಿ ಬಾಯಲ್ಲಿ ಕ್ರಿಮಿನಾಶಕ ಹಾಕಿದ್ದಾರೆ. ವಿಷ ಕುಡಿದು ಮೃತಪಟ್ಟಿದ್ದಾಳೆ ಎಂದು ಗ್ರಾಮದಲ್ಲಿ ಸುದ್ದಿ ಹಬ್ಬಿಸಿ, ಆಗಸ್ಟ್‌ 28ರಂದು ಬೆಳಿಗ್ಗೆ ಶವವನ್ನು ಸುಟ್ಟು ಹಾಕಿದ್ದಾರೆ’ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಧರ್ಮಸ್ಥಳ ಪ್ರಕರಣ | ʼಕೊಂದವರು ಯಾರು?ʼ ಆಂದೋಲನ; ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಕೆ

ಈ ಸಂಬಂಧ ಫರಹತಾಬಾದ್‌ ಪೊಲೀಸರು ಮೂವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಯುವತಿಯ ತಂದೆಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ನೆರವಾದ ಇಬ್ಬರ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X