ಆಸ್ತಿ ಹಂಚಿಕೆ ವಿಚಾರಕ್ಕೆ ಸಹೋದರರ ಮಧ್ಯೆ ಗಲಾಟೆಯಲ್ಲಿ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ರಮೇಶ (52) ಕೊಲೆಯಾದ ವ್ಯಕ್ತಿ. ಸಂಗಪ್ಪ ಕೊಲೆಗೈದ ಸಹೋದರ ಎಂದು ತಿಳಿದು ಬಂದಿದೆ.
ಆಸ್ತಿ ಹಂಚಿಕೆ ವಿಚಾರಕ್ಕೆ ಇಬ್ಬರ ಮಧ್ಯೆ ಪದೇ ಪದೇ ಜಗಳ ನಡೆಯುತ್ತಿತ್ತು. ಶುಕ್ರವಾರವೂ ಜಗಳ ನಡೆದಿತ್ತು. ಸಂಗಪ್ಪ ತಮ್ಮ ರಮೇಶನನ್ನು ಕಟ್ಟಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸುಲೇಪೇಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಬೀದರ್ | ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ತೀವ್ರ ಖಂಡನೆ