ಕಲಬುರಗಿ | ವಿಂಟೇಜ್ ಬಾರ್‌ನಲ್ಲಿ ಬೆಂಕಿ ಅವಘಡ; ತಪ್ಪಿದ ಭಾರಿ ದುರಂತ

Date:

ನಗರದ ತಿಮ್ಮಾಪುರ ಪಿಡಿಎ ಕಾಲೇಜು ರಸ್ತೆ ಸಂಪರ್ಕ ಮಾರ್ಗದಲ್ಲಿರುವ ವಿಂಟೇಜ್ ಬಾರ್ ಆ್ಯಂಡ್‌ ರೆಸ್ಟೋರೆಂಟ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

- Advertisement -

ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಡದೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದಟ್ಟ ಹೊಗೆ ಆವರಿಸಿದ್ದು, ದೂರದಿಂದಲೇ ಹೊಗೆ ಗೋಚರಿಸಿತು. ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ವೀಕ್ಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ತ್ವರಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಸಂಭವನೀಯ ಭಾರಿ ಅನಾಹುತ ತಪ್ಪಿದೆ.

ಅಗ್ನಿ ಅವಘಡದ ವೇಳೆ ಬಾರ್‌ನಲ್ಲಿದ್ದ ಸಿಬ್ಬಂದಿ ಮತ್ತು ಗ್ರಾಹಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.

ಶಾರ್ಟ್ ಸರ್ಕ್ಯೂಟ್ ಸೇರಿದಂತೆ ತಾಂತ್ರಿಕ ದೋಷವೇ ಬೆಂಕಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಪತ್ತೆಹಚ್ಚಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಯಿಂದ ಕಟ್ಟಡದ ಒಳಭಾಗ ಹಾಗೂ ಕೆಲವು ವಸ್ತುಗಳಿಗೆ ಹಾನಿಯಾಗಿರುವ ಸಾಧ್ಯತೆ ಇದ್ದು, ನಷ್ಟದ ಪ್ರಮಾಣದ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಇದನ್ನು ಓದಿದ್ದೀರಾ? ಕಲಬುರಗಿ | ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು; ಸರದಿ ಉಳಿಸಿಕೊಳ್ಳಲು ಚಪ್ಪಲಿಗಳ ತಂತ್ರ

ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಪಕ್ಕದ ಕಟ್ಟಡಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದ್ದು, ಸ್ಥಳೀಯರು ಸಿಬ್ಬಂದಿಯ ಕಾರ್ಯವನ್ನು ಮೆಚ್ಚಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...