ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

Date:

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ ಮನೆಯ ಹಿಂಭಾಗದಲ್ಲಿ ಛಾವಣಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.

- Advertisement -

ಮನೆಯ ಹಿಂಭಾಗದ ಛಾವಣಿಯ ಮೇಲಿದ್ದ ಜಾಲರಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಸುತ್ತಮುತ್ತಲಿನ ಪ್ರದೇಶಕ್ಕೆ ವ್ಯಾಪಿಸಿತು. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಸಮೀಪದ ಎಸ್.ಆರ್. ಮನೋರಮಾ ಎಂಬಸಿ ಮತ್ತು ರಿಗಲ್ ಲಾಡ್ಜ್‌ನಲ್ಲಿದ್ದವರು ಆತಂಕಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಬೆಂಕಿ ಕಾಣಿಸಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಬೆಂಕಿ ಕಟ್ಟಡದ ಇತರ ಭಾಗಗಳಿಗೆ ವ್ಯಾಪಿಸದಂತೆ ಮುನ್ನೆಚ್ಚರಿಕೆ ವಹಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

Advertisements

ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ: ಎರಡನೇ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ...