ಚಿಂಚೋಳಿ ತಾಲ್ಲೂಕಿನ ಕೊಂಡಪಲ್ಲಿ ಗ್ರಾಮದ ವ್ಯಕ್ತಿಯೊಬ್ಬರು ಸೇಡಂ ತಾಲೂಕಿನ ಸಟಪಟನಹಳ್ಳಿ ಗ್ರಾಮ ಸಮೀಪದ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು.
ಗ್ರಾಮಸ್ಥರು ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಿ ಹೊರತೆಗೆದರು.
ಚಿಂಚೋಳಿ ಮತಕ್ಷೇತ್ರ ವ್ಯಾಪ್ತಿಯ ಕೊಂಡಪಲ್ಲಿ ಗ್ರಾಮದ ನರಸಪ್ಪ (60) ವ್ಯಕ್ತಿಗೆ ಕುಟುಂಬಸ್ಥರು ಕಿರುಕುಳಕ್ಕೆ ಮನನೊಂದು ಸಾರಿಗೆ ಬಸ್ ಮೂಲಕ ತೆರಳಿ ಸಟಪಟನಹಳ್ಳಿ ಸೋಮವಾರ ಮಧ್ಯಾಹ್ನ ಗ್ರಾಮದ ಹತ್ತಿರ ಇರುವ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು.
ವಿಷಯ ತಿಳಿದು ಸೇಡಂ ಪೋಲಿಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ : ಬೀದರ್ | ಎಂಲ್ಸಿ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಪಿಎಸ್ಐ ಉಪೇಂದ್ರಕುಮಾರ, ಅಗ್ನಿ ಶಾಮಕ ದಳದ ಸಿಬ್ಬಂದಿಗಳಾದ ಹಣಮಂತ, ರಿಯಾಜ್, ಯುವರಾಜ್ ಬಣಕಾರ ನರೇಂದ್ರ, ಬಸಪ್ಪ , ನಿಂಗರಾಜ, ವಸಂತ ಹಾಗೂ ಸ್ಥಳೀಯರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.