ಕಲಬುರಗಿ | ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಜಯ; ಅಭಿನಂದನೆ ತಿಳಿಸಿದ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ

Date:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ವಿದ್ಯಾರ್ಥಿಗಳ ಹೋರಾಟದ ಮೊದಲ ಗೆಲುವು ಎಂದು ಬಣ್ಣಿಸಿರುವ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ರದ್ದತಿ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ–2020) ಹಿಂಪಡೆಯುವುದು ಸೇರಿದಂತೆ ಉಳಿದ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಬೇಕು ಎಂದು ಕರೆ ನೀಡಿದೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ವೇದಿಕೆ, ‘ದೇಶದ ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಜಾಸತ್ತಾತ್ಮಕ ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸಿದೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿದ್ಯಾರ್ಥಿಗಳ ಐಕ್ಯ ಹೋರಾಟದ ಫಲವಾಗಿದ್ದು, ಇದು ಮೊದಲ ಹೆಜ್ಜೆ ಮಾತ್ರ’ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

‘ಎನ್‌ಟಿಎ ನಡೆಸುವ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ವಿದ್ಯಾರ್ಥಿ ವಿರೋಧಿ, ವಾಣಿಜ್ಯೀಕರಣ ಹಾಗೂ ಕೋಮುವಾದಿ ಎಂದು ಟೀಕಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ–2020)ಯನ್ನು ಹಿಂಪಡೆಯಬೇಕು. ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದೆ.

‘ಅಭಿಜೀತ್ ದಿಪ್ಕೆ, ಸೋನಮ್ ವಾಂಗ್ಚುಕ್, ನೇಹಾ ಹಾಗೂ ಎಸ್‌ಎಫ್‌ಐ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಬೆದರಿಕೆಗಳ ನಡುವೆಯೂ ಹೋರಾಟವನ್ನು ದೃಢವಾಗಿ ಮುನ್ನಡೆಸಿರುವುದನ್ನು ವೇದಿಕೆ ಶ್ಲಾಘಿಸಿದೆ. ಐಕ್ಯ ಹೋರಾಟಗಳಿಂದಲೇ ಜನರ ಬೇಡಿಕೆಗಳಿಗೆ ನ್ಯಾಯ ದೊರೆಯುತ್ತದೆ ಎಂಬುದನ್ನು ಈ ಹೋರಾಟ ಸಾಬೀತುಪಡಿಸಿದೆ’ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ದೆಹಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ವಿರೋಧಿಸಿ ಯಾದಗಿರಿಯಲ್ಲಿ ಪಂಜಿನ ಪ್ರತಿಭಟನೆ

ವೇದಿಕೆಯ ಪ್ರಕಟಣೆಗೆ ಆರ್.ಕೆ. ಹುಡಗಿ, ಮೀನಾಕ್ಷಿ ಬಾಳಿ, ಕೆ. ನೀಲಾ, ಆರ್.ಜಿ. ಶಟಗಾರ, ಅರ್ಜುನ ಭದ್ರೆ, ರವಿ ಸಜ್ಜನ, ಲಕ್ಷ್ಮಣ ದಸ್ತಿ, ಮಹೇಶ ಎಸ್.ಬಿ., ಪದ್ಮಿನಿ ಕಿರಣಗಿ, ಲವಿತ್ರ, ಸರ್ವೇಶ್, ಮರೆಪ್ಪ ಹಳ್ಳಿ, ಪದ್ಮಾ ಮಾಲಿಪಾಟೀಲ, ಧನರಾಜ ತಾಂಬೋಳೆ, ಶಿವಕುಮಾರ ಬಿದ್ರಿ, ದತ್ತಾತ್ರೇಯ ಇಕ್ಕಳಕಿ, ಶಿವಶರಣ ಮುಳೆಗಾಂವ, ಸುಧಾಮ ಧನ್ನಿ, ಇಮಾಮ್ ನದಾಫ್ ಹಾಗೂ ತಾಯಣ್ಣ ಸಹಿ ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...