ಕಲಬುರಗಿ | ಶಾಸಕರ ಹೆಸರಲ್ಲಿ ನಕಲಿ ಪತ್ರ; ದೂರು ದಾಖಲಿಸಿದ ಆಳಂದ ಶಾಸಕ

Date:

ಅನುದಾನ ಬಿಡುಗಡೆಗೆ ಬೇಡಿಕೆ ಇಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಳಂದ ಶಾಸಕ ಬಿ.ಆರ್‌ ಪಾಟೀಲ್‌ ಪತ್ರ ಬರೆದಿದ್ದಾರೆ ಎಂದು ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ‘ಆ ಪತ್ರವನ್ನು ನಾನು ಬರೆದಿಲ್ಲ. ಯಾರೋ ಕಿಡಿಗೇಡಿಗಳು ನಕಲಿ ಪತ್ರ ಸೃಷ್ಟಿಸಿದ್ದಾರೆ’ ಎಂದಿರುವ ಶಾಸಕ ಬಿ.ಆರ್ ಪಾಟೀಲ್ ಕಲಬುರಗಿ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

- Advertisement -

“ನಕಲಿ ಲೆಡರ್‌ಹೆಡ್‌ ಬಳಸಿಕೊಂಡು ನನ್ನ ಹೆಸರಿನಲ್ಲಿ ಪತ್ರ ಬರೆದು, ವೈರಲ್‌ ಮಾಡಿದ್ದಾರೆ. ಇಲ್ಲಸಲ್ಲದ ವಿಷಯವನ್ನು ಪ್ರಸ್ತಾಪ ಮಾಡಿ ನನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ನಡುವೆ ದ್ವೇಷ ಹುಟ್ಟುಹಾಕಲು ಪ್ರಯತ್ನಿಸಿದ್ದಾರೆ. ರಾಜಕೀಯ ಹುನ್ನಾರದಿಂದ ಈ ಪತ್ರ ಸೃಷ್ಠಿಸಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ವೈರಲ್ ಆಗಿರುವ ನಕಲಿ ಪತ್ರದಲ್ಲಿರುವ ಲೆಟರ್‌ಹೆಡ್‌ ಈಗಿನದ್ದಲ್ಲ. ನಾನು ಕಳೆದ ಬಾರಿ ಶಾಸಕನಾಗಿದ್ದಾಗ ವಾಸವಿದ್ದ ಕಲಬುರಗಿ ಶಾಂತಿನಗರದ ಹಳೇ ವಿಳಾಸವಿರುವ ಈ ಹೆಟ್‌ಹೆಡ್‌ಅನ್ನು ಕಿಡಿಗೇಡಿಗಳು ಕಲರ್‌ ಜೆರಾಕ್ಸ್‌ ಮಾಡಿಕೊಂಡು, ಪತ್ರ ಸೃಷ್ಟಿಸಿದ್ದಾರೆ. ನಾನು ನಾಲ್ಕು ವರ್ಷದಿಂದ ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ ವಾಸಿಸುತ್ತಿದ್ದೇನೆ. ನನ್ನ ಈಗಿನ ಲೆಟರ್‌ಹೆಡ್‌ನಲ್ಲಿ ಹೊಸ ವಿಳಾಸವಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನಕಲಿ ಪತ್ರ ಸೃಷ್ಟಿಸಿ, ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ತನಿಖೆಯಾಗಬೇಕು. ಪತ್ರದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಬಯಲಿಗೆ ತರಬೇಕು. ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...