ಕಲಬುರಗಿ | ಬೆಳೆ ವಿಮೆಯಲ್ಲಿ ಮೋಸ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಕೃಷಿ ವಿಮೆ ಸೌಲಭ್ಯ ಪಡೆದಿದ್ದ ರೈತರಿಗೆ ಅಧಿಕಾರಿಗಳು ಮೋಸ ಮಾಡಿದ್ದು, ವಿಮೆ ಮಾಡಿಸದೇ ಇರುವವರ ಖಾತೆಗೆ ಹಣ ಜಮಾ ಮಾಡಿದ್ದಾರೆ. ಅಂತಹ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಅರ್ಹ ರೈತರಿಗೆ ವಿಮೆ ಹಣ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ.

- Advertisement -

ಕಲಬುರಗಿಯಲ್ಲಿ ಪ್ರತಿಭಟನೆ ನೆಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಶರಣಬಸಪ್ಪ ಶೆಟ್ಟಿ, “ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಜಿಲ್ಲೆಯ 1,88,000 ಮಂದಿ ರೈತರು 161 ಕೋಟಿ ರೂಪಾಯಿ ವಿಮೆ ಹಣ ಕಟ್ಟಿದ್ದಾರೆ. ಆ ಪೈಕಿ, ಕೇವಲ 91 ಕೋಟಿ ರೂಪಾಯಿ ಮಾತ್ರ ಬಿಡುಗಡೆಯಾಗಿದೆ. ಉಳಿದ ಹಣ ಬಿಡುಗಡೆಯಾಗಿಲ್ಲ. ಕೂಡಲೇ ಬಾಕಿ ವಿಮೆ ಹಣ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ವಿಮೆ ಹಣಕ್ಕಾಗಿ ಅರ್ಜಿ ಸಲ್ಲಿಸಿದ ರೈತರ ಖಾತೆಗೆ ವಿಮೆ ಹಣ ಜಮಾ ಮಾಡದೇ, ವಿಮೆ ಮಾಡಿದಸ ರೈತರಿಗೆ ಹಣ ಜಮಾ ಮಾಡಿ ದಲ್ಲಾಳಿಗಳು ಹಣ ದೋಚಿದ್ದಾರೆ. ಅವರೊಂದಿಗೆ ಕೆಲವು ಅಧಿಕಾರಿಗಳು ಕೈಜೋಡಿಸಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತುಗೊಳಿಸಿ, ಕ್ರಿಮಿನಲ್ ಕೇಸ್‌ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಜಿಲ್ಲೆಯಲ್ಲಿ ಬರಗಾಲ ವ್ಯಾಪಿಸಿದೆ. ಆದರೂ, ಬರ ಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಕೂಡಲೇ ಬರ ಪೀಡಿತ ಪ್ರದೇಶವೆಂದು ಘೋಷಿಸಿ, ಪರಿಹಾರ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಪ್ರಕಾಶ ಜಾನೆ, ಪದ್ಮಿನಿ ಕಿರಮಗಿ, ದಿಲೀಪ್ ಕುಮಾರ್, ರಾಯಪ್ಪ ಹುರಮುಂಜಿ, ರೇವಣಸಿದ್ದಪ್ಪ ಆಲಗೂಡ, ಜಾಫರ್ ಖಾನಸಾಬ್, ಸಿದ್ದಾರ್ಥ್ ಠಾಕೂರ್, ಕ್ಷೇಮಲಿಂಗ ಭಂಕೂರ, ಕಾವೇರಿ ಭಂಕೂರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...