ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

Date:

ವೃತ್ತಿ ಕೇವಲ ಜೀವನೋಪಾಯದ ಮಾರ್ಗವಾಗದೆ, ಸಮಾಜ ಸೇವೆಯ ಸಾಧನವಾಗುವ ಮೂಲಕ ಮಾನವೀಯತೆಯ ಮೌಲ್ಯಗಳನ್ನು ಎತ್ತಿಹಿಡಿಯಬಹುದು ಎಂಬುದಕ್ಕೆ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಮಲ್ಲಿಕಾರ್ಜುನ ಬಿ. ಹಡಪದ ಅವರ ಸೇವಾ ಕಾರ್ಯವೇ ಸಾಕ್ಷಿ. ಕಡುಬಡತನದಲ್ಲಿ ಬೆಳೆದು ಬಂದ ಅವರು ಬಡವರು, ನಿರ್ಗತಿಕರು ಹಾಗೂ ಅಸಹಾಯಕರ ಸಂಕಷ್ಟಗಳನ್ನು ಅರಿತು, ತಮ್ಮ ಕ್ಷೌರಿಕ ವೃತ್ತಿಯನ್ನೇ ಸಮಾಜ ಸೇವೆಗೆ ಮೀಸಲಿಡುವ ಸಂಕಲ್ಪ ಮಾಡಿದ್ದಾರೆ. 2019ರಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಅವರು, ಇದುವರೆಗೆ 2,350ಕ್ಕೂ ಹೆಚ್ಚು ಜನರಿಗೆ ಉಚಿತ ಕ್ಷೌರ ಮಾಡುವ ಮೂಲಕ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಕಾಳಜಿಯ ಅಪರೂಪದ ಮಾದರಿಯಾಗಿದ್ದಾರೆ.

- Advertisement -

ಪ್ರಸ್ತುತ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಸಮಾಜದ ಹಕ್ಕುಗಳು ಹಾಗೂ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಘಟನಾ ಚಟುವಟಿಕೆಗಳಲ್ಲಿಯೂ ಸಕ್ರಿಯರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಅಸಹಾಯಕರಿಗೆ ಉಚಿತ ಸೇವೆ

Advertisements

ಅನಾಥ ಮಕ್ಕಳು, ಅಂಧರು, ಅಂಗವಿಕಲರು, ಕಿವುಡರು, ಮೂಕರು, ಪೌರ ಕಾರ್ಮಿಕರು, ಕಟ್ಟಡ ಕಾರ್ಮಿಕರು, ನಿರ್ಗತಿಕರು, ಬುದ್ಧಿಮಾಂದ್ಯರು, ಸಾಧು-ಸಂತರು, ಅನಾಥಾಶ್ರಮದ ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಹಲವು ಬಾರಿ ಉಚಿತ ಕ್ಷೌರ ಸೇವೆ ಸಲ್ಲಿಸಿದ್ದಾರೆ.

ಗ್ರಾಮೀಣ ಭಾಗದ ಬಡವರು ಮತ್ತು ನಿರ್ಗತಿಕರ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಅಸಹಾಯಕರಿಗೂ ತಮ್ಮ ಸೇವೆಯನ್ನು ವಿಸ್ತರಿಸಿದ್ದಾರೆ. ಕಲ್ಯಾಣ ಕರ್ನಾಟಕದ ವಿವಿಧ ಮಠಾಧೀಶರ ಜನ್ಮದಿನ ಹಾಗೂ ವಿಶೇಷ ಸಂದರ್ಭಗಳಲ್ಲಿ ಬಡವರು ಮತ್ತು ಅನಾಥರಿಗೆ ಉಚಿತ ಕ್ಷೌರ ಸೇವೆ ನೀಡುವ ಮೂಲಕ ಸಮಾಜದಲ್ಲಿ ಮಾನವೀಯತೆಯ ಸಂದೇಶ ಸಾರಿದ್ದಾರೆ.

ಕೋವಿಡ್ ಸಂಕಷ್ಟದಲ್ಲೂ ಸೇವೆ

ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ಜನರು ಪರಸ್ಪರ ಸಂಪರ್ಕಕ್ಕೂ ಹೆದರುತ್ತಿದ್ದ ಪರಿಸ್ಥಿತಿಯಲ್ಲಿಯೂ ಮಲ್ಲಿಕಾರ್ಜುನ ಹಡಪದ ಅವರು ತಮ್ಮ ಆರೋಗ್ಯದ ಅಪಾಯವನ್ನು ಲೆಕ್ಕಿಸದೆ ಸೇವೆ ಮುಂದುವರಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಡವರು ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಆಶ್ರಯವಿಲ್ಲದೆ ವಾಸಿಸುತ್ತಿದ್ದ ನಿರ್ಗತಿಕರಿಗೆ ಹಲವು ಬಾರಿ ಉಚಿತ ಕ್ಷೌರ ಸೇವೆ ಸಲ್ಲಿಸಿ ಮಾನವೀಯತೆ ಮೆರೆದಿದ್ದಾರೆ.

3575171

ಕನ್ನಡ ನಾಡು-ನುಡಿಯ ಸೇವೆಯಲ್ಲೂ ಸಕ್ರಿಯ

ಕ್ಷೌರಿಕ ವೃತ್ತಿ ಮತ್ತು ಸಮಾಜ ಸೇವೆಯ ಜೊತೆಗೆ ಕನ್ನಡ ನಾಡು-ನುಡಿಯ ಹಿತಕ್ಕಾಗಿ ಕೂಡ ಅವರು ಶ್ರಮಿಸುತ್ತಿದ್ದಾರೆ. ಚಿತ್ತಾಪುರ ತಾಲೂಕಿನ ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ನಾಡು, ನುಡಿ, ನೆಲ, ಜಲದ ಪರವಾಗಿ ಹಾಗೂ ಕನ್ನಡಪರ ಸಂಘಟನೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ನ.30ರವರೆಗೆ ಕಾಲುವೆಗೆ ನಿರಂತರ ನೀರು ಹರಿಸಿ, ಎಕರೆಗೆ ₹50 ಸಾವಿರ ಪರಿಹಾರ ನೀಡಿ: ರೈತರ ಆಗ್ರಹ

ತಮ್ಮ ವೃತ್ತಿಯನ್ನು ಸಮಾಜದ ಅಸಹಾಯಕರ ಸೇವೆಗೆ ಸಮರ್ಪಿಸಿಕೊಂಡಿರುವ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಅವರ ಸಮಾಜಮುಖಿ ಕಾರ್ಯಗಳಿಗೆ ಮಠಾಧೀಶರು, ಸಮಾಜದ ಮುಖಂಡರು, ಹಡಪದ ಅಪ್ಪಣ್ಣ ಸಮಾಜದ ನಾಯಕರು, ಕಲಬುರಗಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಆತ್ಮೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಸೇವಾ ಕಾರ್ಯಗಳು ನಿರಂತರವಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಲ್ ಫಲಾಹ್ ಮಸೀದಿ ಉದ್ಘಾಟನೆ; ಸರ್ವಧರ್ಮೀಯರ ಸಂಗಮಕ್ಕೆ ಸಾಕ್ಷಿಯಾದ ಗೋಳಿಕಟ್ಟೆ

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ,...

ಉಡುಪಿ | ಮೋದಿ–ಅಮಿತ್ ಶಾ ಸರ್ಕಾರದ ಅಂತ್ಯ ಸಮೀಪಿಸುತ್ತಿದೆ: ಲಕ್ಷ್ಮೀಶ ಗಬ್ಬಲಡ್ಕ

ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾನದ ಪಾವಿತ್ರ್ಯತೆಯನ್ನು ರಕ್ಷಿಸುವ ಉದ್ದೇಶದಿಂದ...

ಬಾಗಲಕೋಟೆ |ಕಬ್ಬು ಟನ್ಗೆ ₹3,600 ದರ ನಿಗದಿ: ಬಾಗಲಕೋಟೆಯಲ್ಲಿ 8 ಗಂಟೆಗಳ ಸಭೆಯ ಬಳಿಕ ಒಮ್ಮತ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ...

ಕಬ್ಬು ಬೆಳೆ ಹೋರಾಟಗಾರರ ಬಂಧನಕ್ಕೆ ರೈತ ಸಂಘ ಖಂಡನೆ

ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸೌಹಾರ್ದಯುತವಾಗಿ ಮತ್ತು ಸಮಾಧಾನಕರವಾಗಿ ಬಗೆಹರಿಸದೆ ಹೋರಾಟಗಾರರನ್ನು ಬಂಧಿಸಿರುವ...