ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

Date:

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ ಜನ್ಮದಿನಾಚರಣೆ ಅಂಗವಾಗಿ ವೆಂಕಟಗಿರಿ ಸೌಹಾರ್ದ ಸಹಕಾರ ಸಂಘದ ವತಿಯಿಂದ ವಿವಿಧ ಸಾಮಾಜಿಕ ಹಾಗೂ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪವನಕುಮಾರ ಬಿ. ವಳಕೇರಿ ಅವರು, ಸೆ.16ರಂದು ಬೆಳಗ್ಗೆ 11 ಗಂಟೆಗೆ ಖಣದಾಳ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯುರ್ವೇದ ಹಾಗೂ ಔಷಧೀಯ ಸಸಿಗಳನ್ನು ನೆಡಲಾಗುವುದು. ಬಳಿಕ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಔಷಧೀಯ ಸಸ್ಯಗಳ ಮಹತ್ವದ ಕುರಿತು ತಜ್ಞ ರಮೇಶ ಮಹೇಂದ್ರಕರ ಹಾಗೂ ಯೋಗದ ಕುರಿತು ಪತಂಜಲಿ ಯೋಗ ಸಂಸ್ಥೆಯ ಶಿವಾನಂದ ಸಾಲಿಮಠ ಮಾಹಿತಿ ನೀಡಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಸೆ.18ರಂದು ಕೋಟನೂರಿನ ಸಿದ್ದಶ್ರೀ ಡಿವೈನ್ ಪ್ಯಾಲೇಸ್‌ನಲ್ಲಿ ತಜ್ಞ ವೈದ್ಯರಿಂದ ಉಚಿತ ನೇತ್ರ ತಪಾಸಣೆ ಹಾಗೂ ವಿವಿಧ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಅಗತ್ಯವಿರುವವರಿಗೆ ನೇತ್ರ ಶಸ್ತ್ರಚಿಕಿತ್ಸೆ ನಡೆಸಲು ಸಹ ವ್ಯವಸ್ಥೆ ಮಾಡಲಾಗಿದೆ. ಅಲ್-ಬದರ್ ಡೆಂಟಲ್ ಕಾಲೇಜು, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಅನುಗ್ರಹ ಕಣ್ಣಿನ ಆಸ್ಪತ್ರೆ, ಯುನೈಟೆಡ್ ಆಸ್ಪತ್ರೆ ಹಾಗೂ ಜಿಲ್ಲಾ ಕುಷ್ಠರೋಗ ನಿಯಂತ್ರಣ ಇಲಾಖೆ ಶಿಬಿರಕ್ಕೆ ಸಹಭಾಗಿತ್ವ ನೀಡಲಿವೆ ಎಂದು ತಿಳಿಸಿದರು.

ಸೆ.19ರಂದು ನಂದಿಕೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪವನಕುಮಾರ ಬಿ. ವಳಕೇರಿ ಅವರ ರಾಜಕೀಯ ಜೀವನದ 25ನೇ ವರ್ಷದ ಬೆಳ್ಳಿ ಮಹೋತ್ಸವದ ಅಂಗವಾಗಿ ಅಭಿಮಾನಿಗಳ ವತಿಯಿಂದ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನು ಓದಿದ್ದೀರಾ? ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ನಂದಿಕೂರು, ಖಣದಾಳ, ಸೀತನೂರ, ಪಾಣೆಗಾಂವ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆರೋಗ್ಯ ಶಿಬಿರ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಗಮೇಶ ನಾಗನಳ್ಳಿ, ಶಿವಾನಂದ ಸಾಲಿಮಠ, ರವೀಂದ್ರ ವಿಭೂತಿ ಹಾಗೂ ಲೋಹಿತ್ ವೈ. ಕಲ್ಲೂರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...