ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಠೋಡ್ ಮತ್ತು ಸಹಾಯಕ ನಿರ್ದೇಶಕ ಅನಿಲ್ ರಾಠೋಡ್, ನಾಗೆಂದ್ರಪ್ಪ ನೇತ್ರತ್ವದ ತಂಡ ಭೇಟಿ ನೀಡಿತು.
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಸ್ಥಳಕ್ಕೆ ಭೇಡಿ ನೀಡಿ ಪರಿಶೀಲಿಸಿದರು. ಬಳಿಕ ಕಾರ್ಮಿಕರರಿಗೆ ಆರೋಗ್ಯ ತಪಾಸಣೆ ನಡೆಸಿದರು.
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಠೋಡ್ ಮಾತನಾಡಿ, ʼಮನರೇಗಾ ಯೋಜನೆಯಡಿ ದಿನಕ್ಕೆ ₹370 ಕೂಲಿ ಹೆಚ್ಚಳವಾಗಿದೆ. ಉತ್ತಮವಾಗಿ ಕೆಲಸ ಮಾಡಿದರೆ ಆರೋಗ್ಯ ಸದೃಢವಾಗಿರುತ್ತದೆ. ರೋಗದಿಂದ ಮುಕ್ತರಾಗಿ ಇರಬಹುದುʼ ಎಂದು ಹೇಳಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಪವನ ಪಾಟೀಲ, ಸದಸ್ಯ ಮೋಹನ್ ಗುತ್ತೇದಾರ, ಗ್ರಾಮ ಪಂಚಾಯತ್ ಅಧಿಕಾರಿ ವಾಹೇದಾಲ್ಲಿ, ಜಗನಾಥ್, ಡಿಇಒ ಹನುಮಂತ ಭೋವಿ ಸೇರಿದಂತೆ ಯಾಸ್ಮಿ, ಶ್ರೀಧರ್ ಸಂಖ್ಯೆಯಲ್ಲಿ ಗ್ರಾಮಸ್ಥರು ಇದ್ದರು.