ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

Date:

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾತ್ಮ ಗಾಂಧೀಜಿಯವರ ಆದರ್ಶಗಳು ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ನಂದಿಕೂರ ಮಾಜಿ ಅಧ್ಯಕ್ಷ ಪವನಕುಮಾರ ಬಿ. ವಳಕೇರಿ ಹೇಳಿದರು.

- Advertisement -

ನಗರದ ಹೊರವಲಯದ ತೇಲ್ಕರ್ ಬಡಾವಣೆಯಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಂಗ್ರೆಸ್ ಯುವ ನಾಯಕ ರವೀಂದ್ರ ವಿಭೂತಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಹೋರಾಟದ ಫಲವಾಗಿ ದೇಶ ಸ್ವಾತಂತ್ರ್ಯ ಪಡೆದಿದ್ದು, ಅದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದರು.

ಕಲಬುರಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಮಾತನಾಡಿ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದು ನಾಯಕತ್ವ ವಹಿಸಬೇಕು ಎಂಬ ಆಶಯವನ್ನು ಗಾಂಧೀಜಿ ಹೊಂದಿದ್ದರು. ಅವರ ವಿಚಾರಧಾರೆಗಳು ಮಹಿಳಾ ಸಬಲೀಕರಣಕ್ಕೂ ಪ್ರೇರಣೆಯಾಗಿವೆ ಎಂದರು.

Advertisements
Advertisements

ಗಾಂಧೀಜಿ ಜಯಂತಿ ಅಂಗವಾಗಿ ನಗರದ ನಂದಿಕೂರ ತಾಂಡಾ ಹಾಗೂ ತೇಲ್ಕರ್ ಬಡಾವಣೆಯಲ್ಲಿ ಸಸಿಗಳನ್ನು ವಿತರಿಸಲಾಯಿತು.

ಇದನ್ನು ಓದಿದ್ದೀರಾ? ದೆಹಲಿಯ ಸರ್ಪಗಾವಲಿಗೂ ಜಗ್ಗದ ಯುವಜನತೆ, ಮುಂಬೈನಲ್ಲಿ ಮೊಳಗಿದ ರಣಕಹಳೆ: ಗ್ಯಾನೇಶ್ ವಜಾಕ್ಕೆ ಒಗ್ಗೂಡಿದ ಪ್ರಜಾಶಕ್ತಿ

ಕಾರ್ಯಕ್ರಮದಲ್ಲಿ ಮಲ್ಲಣಗೌಡ ಪಾಟೀಲ ನಂದಿಕೂರ, ರೋಷನ್ ಬಿ. ಹಮೀರಾಸಾಬ್ ಉತನಾಳ್, ವಿಠಾಬಾಯಿ ಪಾಟೀಲ, ವಿಜಯಕುಮಾರ ಮಣಿಕರಾವ, ಹೂವಣ್ಣಗೌಡ, ರಾಹುಲ್, ರಮೇಶ್, ಸೋನು, ತೇಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...