ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿ, 60 ಗ್ರಾಂ ಗಾಂಜಾ ಹಾಗೂ ₹1,500 ನಗದು ವಶಪಡಿಸಿಕೊಂಡಿದ್ದಾರೆ.
ಸೆ.29ರಂದು ರೋಜಾ ಮಾರ್ಕೆಟ್‌ನ ಅಕ್ಟರಿ ಮಸೀದಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಈ ವೇಳೆ ನಬೀ (30), ರಸೂಲ ಬಿ (56) ಹಾಗೂ ಹೀನಾ ಪರ್ವೀನ (34) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಅಂದಾಜು ₹6,000 ಮೌಲ್ಯದ 60 ಗ್ರಾಂ ಗಾಂಜಾ ಹಾಗೂ ₹1,500 ನಗದು ವಶಪಡಿಸಿಕೊಳ್ಳಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ
ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಐಪಿಎಸ್ ಹಾಗೂ ಪ್ರವೀಣ್ ಎಚ್. ನಾಯಕ್ ಅವರ ಮಾರ್ಗದರ್ಶನದಲ್ಲಿ ಎಸಿಪಿ ಶಿವನಗೌಡ ಪಾಟೀಲ ನೇತೃತ್ವದಲ್ಲಿ ರೋಜಾ ಠಾಣೆ ಪಿಐ ದಿಲೀಪಕುಮಾರ ಸಾಗರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
This video cannot be played in your browser. Open the video directly






