ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬರ ಬಿ ಗ್ರಾಮದ ಜಮೀನೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಕಬ್ಬಿನ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆದಿರುವ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವುದು ತಿಳಿದುಬಂದಿದೆ.
“ದಾಳಿ ನಡೆಸಿದ ಅಧಿಕಾರಿಗಳು, ಒಟ್ಟು 57.7 ಕೆಜಿ ಒಣ ಗಾಂಜಾ ಮತ್ತು 15 ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕರ ವಿರುದ್ದ ಎನ್‌ಡಿಪಿಎಸ್ ಕಾಯ್ದೆ-1985ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಯೆಂದು ನಮೂದು: ರೈತ ಸಂಘದ ಕರೆಪ್ಪ ಕರಗೊಂಡ
ದಾಳಿಯಲ್ಲಿ ಆಳಂದ ವಲಯ ಕಚೇರಿಯ ಅಬಕಾರಿ ನಿರೀಕ್ಷಕ ಶ್ರೀಧರ ನಿರೋಣಿ, ಅಬಕಾರಿ ಉಪ ನಿರೀಕ್ಷಕ ಬಸವರಾಜ ಮಾಲಗತ್ತಿ ಹಾಗೂ ಕಲಬುರಗಿ ವಿಭಾಗ ಕಚೇರಿಯ ಅಬಕಾರಿ ನಿರೀಕ್ಷಕ ನರೇಂದ್ರಕುಮಾರ ಹೊಸಮನಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದುರು.
ವರದಿ : ವಾಲೆಂಟಿಯರ್ – ಎಸ್ ರೆಡ್ಡಿ