ಕಲಬುರಗಿ | ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರಕ್ಕೆ ಎನ್‌ಎಫ್‌ಐಡಬ್ಲ್ಯೂ ಆಗ್ರಹ

Date:

ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಾದ್ಯಂತ ಆಕ್ರೋಶ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯೂ) ಕಲಬುರಗಿ ಜಿಲ್ಲಾ ಸಮಿತಿಯವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಭಾರತೀಯ ಮಹಿಳಾ ಒಕ್ಕೂಟ ಜಿಲ್ಲಾಧ್ಯಕ್ಷೆ ಪದ್ಮಾವತಿ ಎನ್. ಮಾಲಿಪಾಟೀಲ ಮಾತನಾಡಿ, “ಕಲಬುರಗಿಯ ತಾಜ್ ಶಹಜಾನಪುರ ಮೂಲದ ಅಲೆಮಾರಿ ಬುಡಕಟ್ಟು ಕುಟುಂಬವು ಮೈಸೂರಿನ ದಸರಾ ಉತ್ಸವದ ವೇಳೆ ಬಲೂನ್ ಮಾರಾಟ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟೆಂಟ್‌ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಮಾನವೀಯತೆಯ ಮೇಲಿನ ಕಳಂಕ” ಎಂದು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
371196

“ಆರೋಪಿಯನ್ನು ಮೈಸೂರು ನಗರ ಪೊಲೀಸರು ಶೀಘ್ರ ಬಂಧಿಸಿದ್ದಾರೆ. ಆದರೆ, ಬಾಲಕಿಯ ಮೃತ ದೇಹವನ್ನು ಕಲಬುರಗಿಗೆ ತರಲು ಹಾಗೂ ಅಂತ್ಯಕ್ರಿಯೆಗೆ ಸರ್ಕಾರದಿಂದ ಯಾವುದೇ ಆರ್ಥಿಕ ನೆರವು ನೀಡದಿರುವುದು ಖೇದಕರ” ಎಂದು ಅವರು ಹೇಳಿದರು.

ʼಸರ್ಕಾರವು ಮೃತ ಬಾಲಕಿ ಕುಟುಂಬಕ್ಕೆ ತಕ್ಷಣದ ಪರಿಹಾರ ನೀಡಬೇಕು, ಉಳಿದ ಮಕ್ಕಳಿಗೆ ಸುರಕ್ಷತೆ ಹಾಗೂ ಶಿಕ್ಷಣದ ವ್ಯವಸ್ಥೆ ಮಾಡಬೇಕು. ಪ್ರಕರಣವನ್ನು ಪೋಷಕರ ಅನುಕೂಲಕ್ಕಾಗಿ ಕಲಬುರಗಿ ಜಿಲ್ಲೆಗೆ ವರ್ಗಾಯಿಸಬೇಕು. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಟೆಂಟ್‌ಗಳಲ್ಲಿ ವಾಸಿಸುತ್ತಿರುವ ಇತರ ಬುಡಕಟ್ಟು ಕುಟುಂಬಗಳಿಗೆ ರಕ್ಷಣಾತ್ಮಕ ವಸತಿ ಸೌಲಭ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾಶ್ರೀ, ಆಕಾಶ ಎಸ್‌ ಪಾರಚಾ, ಜಗದೇವಿ ಆರ್ ಹೆಗಡೆ, ಪಾತಿಮಾ ಶೇಖ, ಶಾಹೀನ ಸುಲ್ತಾನಾ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...