ಕಲಬುರಗಿ | ಸಿಮೆಂಟ್‌ ಕಾರ್ಖಾನೆ ಜೊತೆ ಗ್ರಾಮ ಪಂಚಾಯತಿ ಅವ್ಯವಹಾರ; ತನಿಖೆಗೆ ಆಗ್ರಹ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ‘ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆ’ಯಿಂದ ನಿಯಮಾನುಸಾರ ತೆರಿಗೆ ವಸೂಲಿ ಮಾಡಲಾಗುತ್ತಿಲ್ಲ. ಗ್ರಾಮ ಪಂಚಾಯತಿ ಅಧಿಕಾರಿಗಳು ಅನಧಿಕೃತ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿ ಪಂಚಾಯತಿ ಸದಸ್ಯ ಉಮೇಶ್‌ ಪಾಂಡುಸಿಂಗ್ ಚವ್ಹಾಣ್‌ ಅವರು ತಾಲೂಕಿನ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

“ನಿಯಮದಂತೆ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಯು ವಾರ್ಷಿಕ 43,25,175 ರೂ. ತೆರಿಗೆ ಪಾವತಿಸಬೇಕು. ಆದರೆ, ಇಲ್ಲಿಯವರೆಗೂ ಅವರು ತೆರಿಗೆ ಸಂದಾಯ ಮಾಡಿಲ್ಲ. ಕರ್ನಾಟಕ ಪಂಚಾಯತಿ ಕಾಯ್ದೆ 1993ರ ಭಾಗ 8 ಮತ್ತು ಕಲಂ 202ರ ಪ್ರಕಾರ ಕಾರ್ಕಾನೆ, ಕಟ್ಟಡಗಳಿಗೆ ತೆರಿಗೆಯನ್ನು ನಿಗದಿ ಮಾಡಲಾಗುತ್ತದೆ. ಆದರೆ, ಪಂಚಾಯತಿ ಅಧಿಕಾರಿಗಳು ಈ ನಿಯಮಗಳನ್ನು ಗಾಳಿಗೆ ತೂರಿ ಅಲ್ಟ್ರಾಟೆಕ್‌ ರಾಜ ಸಿಮೆಂಟ್ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಇತರೇ ಸದಸ್ಯರುಗಳು ಕಂಪನಿಯಿಂದ ಪ್ರತ್ಯೇಕ್ಷವಾಗಿ ಮತ್ತು ಪರೋಕ್ಷವಾಗಿ ಅನುಕೂಲತ ಪಡೆದಿದ್ದಾರೆ. ಅವರ ಬ್ಯಾಂಕ್‌ ಖಾತೆಗಳಿಗೆ ಹಣ ಸಂದಾಯವಾಗಿರುವುದು ಕಂಡು ಬಂದಿರುತ್ತದೆ. ಕಾರ್ಖಾನೆಯೊಂದಿಗೆ ಅವ್ಯವಹಾರ ನಡೆಸಿರುವ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ...

ಬೀದರ್‌ | ಜೆಜೆಎಂ ಕಾಮಗಾರಿ ಅಪೂರ್ಣ: ಕೆಸರು ಗದ್ದೆಯಂತಾದ ರಸ್ತೆಗಳು

ಮಳೆಗೆ ಕೆಸರು ಗದ್ದೆಯಂತಾದ ರಸ್ತೆ, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ...