ಕಲಬುರಗಿ | ಶೈಕ್ಷಣಿಕ ಸುಧಾರಣಾ ಸಮಿತಿಗೆ ಗುರುರಾಜ ಕರಜಗಿ ನೇಮಕ ಖಂಡನೀಯ: ವೆಲ್ಪೇರ್ ಪಾರ್ಟಿ

Date:

Advertisements

ಶೈಕ್ಷಣಿಕ ಸುಧಾರಣಾ ಸಮಿತಿಯ ನೇತೃತ್ವವನ್ನು ಸಂಘ ಪರಿವಾರ ಹಿನ್ನೆಲೆಯ ಗುರುರಾಜ ಕರಜಗಿಯವರನ್ನು ನೇಮಕ ಮಾಡಿದ ಸರಕಾರದ ಕ್ರಮ ಖಂಡನೀಯ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಈ ಸಂಬಂಧ ಹೇಳಿಕೆ ನೀಡಿರುವ ಅವರು, “ಸರ್ಕಾರದ ಇಂತಹ ನಡೆ ನೋಡಿದಾಗ ಜನರಿಗೆ ಈಗ ಆಡಳಿತದಲ್ಲಿರುವುದು ಕಾಂಗ್ರೆಸ್ ಸರಕಾರವೋ ಅಥವಾ ಬಿಜೆಪಿ ಸರಕಾರವೋ ಎಂಬ ಅನುಮಾನ ಮೂಡುವಂತಿದೆ” ಎಂದರು.

“ಶಿಕ್ಷಣದ ಸುಧಾರಣಾ ಸಮಿತಿಯಂತಹ ಮಹತ್ವದ ಹುದ್ದೆಗಳಿಗೆ ನೇಮಕ ಮಾಡುವಾಗ ಅವರ ಹಿನ್ನೆಲೆ ಅರಿಯುವಂತಹ ವ್ಯವಧಾನ ಸರಕಾರಕ್ಕೆ ಇಲ್ಲದಾಯಿತೇ? ಇಂತಹವರ ನೇಮಕಾತಿಗೆ ಶಿಫಾರಸು ಮಾಡುವವರು ಬಗ್ಗೆಯೂ ಜನರಿಗೆ ಸಂಶಯವಿದೆ” ಎಂದು ಅನುಮಾನಿಸಿದರು.

Advertisements

“ಶಿಕ್ಷಣ ಕ್ಷೇತ್ರವನ್ನು ಶ್ರೀಮಂತಗೊಳಿಸುವುದು ಬಿಟ್ಟು ಹಾಳು ಮಾಡಲು ಅವಕಾಶ ಮಾಡಿಕೊಡುವ ಸರಕಾರದ ನಿರ್ಧಾರವನ್ನು ವೆಲ್ಪೇರ್ ಪಾರ್ಟಿ ತೀವ್ರವಾಗಿ ಖಂಡಿಸುತ್ತಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹಳೆಬೀಡು | ‘ಬಿಗ್‌ಬಾಸ್’ನಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ: ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ

“ಸರಕಾರ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಕನ್ನಡ ನಾಡಿನಲ್ಲಿ ಆ ಹುದ್ದೆಗೆ ಅರ್ಹರಾದ ಹಲವಾರು ಮಂದಿಯಿದ್ದರೂ ಅತ್ತ ಗಮನ ಹರಿಸದೆ ಸಂಘಪರಿವಾರ ಹಿನ್ನೆಲೆಯ ವ್ಯಕ್ತಿಗಳನ್ನು ತಂದು ಕೂರಿಸುವ ಉದ್ದೇಶವಾದರೂ ಏನು ಎಂದು ಮುಬೀನ್ ಅಹ್ಮದ್ ಅವರು ರಾಜ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X