ಕಲಬುರಗಿ | ಇಬ್ಬರು ಶಾಸಕರಿದ್ದರೂ ದುರಸ್ತಿ ಕಾಣದ ಹಾಗರಗಾ ಮುಖ್ಯ ಹೆದ್ದಾರಿ; ಸ್ಥಳೀಯರಿಂದ ಹಿಡಿಶಾಪ

Date:

ಕಲಬುರಗಿ ನಗರದ ಮಾಲಗತ್ತಿ ಕ್ರಾಸ್‌ ಹಾಗೂ ಹಾಗರಗಾ ಮುಖ್ಯ ಹೆದ್ದಾರಿಯು ದೊಡ್ಡ ದೊಡ್ಡ ತಗ್ಗು ಗುಂಡಿಗಳಿಂದ ಕೂಡಿದ್ದು, ಇಬ್ಬರು ಶಾಸಕರಿದ್ದರೂ ದುರಸ್ತಿ ಮಾಡುವ ಸಾಹಸಕ್ಕೆ ಯಾರೂ ಕೈ ಹಾಕಿಲ್ಲ. ಹಾಗಾಗಿ ಮುಖ್ಯ ಹೆದ್ದಾರಿ ದುರಸ್ತಿ ಕಾಣದಂತಾಗಿದೆ.

- Advertisement -

ಕಲಬುರಗಿ ನಗರದ ಹಾಗರಗಾ ಕ್ರಾಸ್‌ನಿಂದ ಮಾಲಗತ್ತಿ ಕ್ರಾಸ್‌ವರೆಗೆ ಶಾಸಕಿ ಕನೀಝ್‌ ಫಾತಿಮಾ ಅವರು ಪ್ರತಿನಿಧಿಸುವ ಕಲಬುರಗಿ ಉತ್ತರ ವಲಯದ ವ್ಯಾಪ್ತಿಗೆ ಒಳಪಡುತ್ತದೆ. ಮಾಲಗತ್ತಿ ಕ್ರಾಸ್‌ನಿಂದ ಹಾಗರಗಾ, ಖಾಜಾ ಕೋಟನೂರ್ ಗ್ರಾಮಗಳು ಶಾಸಕ ಬಸವರಾಜ ಮತ್ತಿಮುಡ್ ಪ್ರತಿನಿಧಿಸುವ ಕಲಬುರಗಿ ಗ್ರಾಮಾಂತರ ಕ್ಷೇತ್ರಕ್ಕೆ ಒಳ್ಳಪಡುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ರಸ್ತೆ ಶಾಸಕ ಬಸವರಾಜ ಮತ್ತಿಮುಡ್ ಅವರ ಕ್ಷೇತ್ರಕ್ಕೆ ಬರುವುದಿದ್ದರೂ, ಮತದಾರರು ಶಾಸಕಿ ಕನೀಝ್‌ ಫಾತಿಮಾ ಕ್ಷೇತ್ರದವರಾಗಿದ್ಧಾರೆ. ‘ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು’ ಅಂದಂಗೆ ಹಾಗರಗಾ ಮುಖ್ಯ ಹೆದ್ದಾರಿ ದುರಸ್ತಿ ಕಾಣದಾಗಿದೆ.

ಹಾಗರಗಾ ಮುಖ್ಯ ಹೆದ್ದಾರಿ 2 1

ಹಾಗರಗಾ, ಖಾಜಾ ಕೋಟನೂರ್, ಹಳೆ ಹೆಬ್ಬಾಳ, ಹೊಸ ಹೆಬ್ಬಾಳ, ಹೆಬ್ಬಾಳ ಚಿಂಚೋಳಿ, ಕಾಳಗಿ ಹೀಗೆ ಹಲವಾರು ಹಳ್ಳಿಗಳಿಗೆ, ತಾಲೂಕುಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಇಂತಹ ರಸ್ತೆ ದೊಡ್ಡ ದೊಡ್ಡ ತಗ್ಗು ಗುಂಡಿಗಳಿಂದ ತುಂಬಿದ್ದು, ಸಂಪೂರ್ಣ ಹಾಳಾಗಿ ಸುಮಾರು ವರ್ಷಗಳೇ ಕಳೆದರೂ ಕೂಡಾ ದುರಸ್ತಿ ಭಾಗ್ಯ ಸಿಕ್ಕಿಲ್ಲ.

ಈ ರಸ್ತೆ ಮೂಲಕ ನಿತ್ಯವೂ ಸಾವಿರಾರು ಜನರು ಸಂಚಾರ ಮಾಡುತ್ತಾರೆ. ಸರ್ಕಾರಿ ಬಸ್, ದ್ವಿಚಕ್ರ ವಾಹನ, ಸೈಕಲ್, ಆಟೋ, ಕ್ರೂಸರ್, ಟೆಂಪೊ, ಟ್ಯಾಂಕರ್, ಗೂಡ್ಸ್ ವಾಹನಗಳು ಸೇರಿದಂತೆ ಹಲವಾರು ಬೃಹತ್ ವಾಹನಗಳು ಈ ರಸ್ತೆಯಲ್ಲಿ ನಿರಂತರವಾಗಿ ಸಂಚಾರ ಮಾಡುತ್ತವೆ. ಹಾಗಾಗಿ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ರಸ್ತೆ ಸಮಸ್ಯೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಜೀವ ಕೈಯಲ್ಲಿಡಿದು ಓಡಾಡುವಂತಾಗಿದೆ.

ಕಲಬುರಗಿ ಉತ್ತರ ವಲಯದ ಹಾಗರಗಾ ಕ್ರಾಸ್‌ನಿಂದ 200 ಮೀಟರ್ ದೂರದಲ್ಲಿ ಮಾಲಗತ್ತಿ ಕ್ರಾಸ್‌ನಿಂದ ಹಾಗರಗಾ ಗ್ರಾಮದ ಉದ್ದಕ್ಕೂ ತಗ್ಗುಗುಂಡಿಗಳು ಬಿದ್ದಿದ್ದು, ಶಾಲಾ-ಕಾಲೇಜಿಗೆ ಹೋಗುವ ಮಕ್ಕಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಪೋಷಕರು ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ ತುಂಬಾ ಸಂಕಟ ಅನುಭವಿಸುತ್ತಿದ್ದಾರೆ.

“ಚರಂಡಿ ಕಾಮಗಾರಿಯನ್ನು ಕಳಪೆ ಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು, ಚರಂಡಿ ನೀರು ನಿರಂತರವಾಗಿ ರಸ್ತೆ ಮೇಲೆ ಹರಿಯುತ್ತಿರುವುದರಿಂದ ಜನಸಾಮಾನ್ಯರು ಕೊಳಚೆ ನೀರಿನಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ಮಳೆ ಬಂದರೆ ಚರಂಡಿ ನೀರು, ಮಳೆನೀರು, ಕೆಸರು ಎಲ್ಲವೂ ಸೇರಿಕೊಂಡು ರಸ್ತೆ ಯಾವುದು, ಗುಂಡಿ ಯಾವುದು ಎಂಬುದೇ ತಿಳಿಸಿಯದಂತಾಗಿದೆ. ಇದರಿಂದ ಈ ರಸ್ತೆಯಲ್ಲಿ ಅನೇಕ ಅಪಘಾತಗಳು ಸಂಭವಿಸಿರುವ ಉದಾಹರಣೆಗಳೂ ಇವೆ” ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.

ಖಾಜಾ ಕೋಟನೂರ್ ನಿವಾಸಿ ಹಣಮಯ್ಯ ಗುತ್ತೇದಾರ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಾಗರಗಾದಿಂದ ಕಾಳಗಿಗೆ ಹೋಗುವ ಮುಖ್ಯ ಹೆದ್ದಾರಿ ತಗ್ಗು, ಗುಂಡಿಮಯವಾಗಿದ್ದು, ತೀರಾ ಸಮಸ್ಯೆ ಎದುರಿಸುವಂತಾಗಿದೆ. ಜನಪ್ರತಿನಿಧಿಗಳಿಗೆ, ಜಿಲ್ಲಾಧಿಕಾರಿ ಹಾಗೂ ಶಾಸಕರಿಗೆ ಜನಸಾಮಾನ್ಯರ ಕುರಿತು ಕಾಳಜಿಯೇ ಇಲ್ಲ. ಯಾವ ಸರ್ಕಾರ ಅಧಿಕಾರಕ್ಕೆ ಬಂದರೆ ಏನು ಪ್ರಯೋಜನ? ಇವರೆಲ್ಲ ಜನರನ್ನು ತೊಂದರೆಯಲ್ಲಿ ಸಿಲುಕಿಸಿ ಎಂತಹ ರಾಜಕೀಯ ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಗರಗಾ ಮುಖ್ಯ ಹೆದ್ದಾರಿ 1

ಹಾಗರಗಾ ನಿವಾಸಿ ಹಾರುನ್ ರಶೀದ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮೂರ್ನಾಲ್ಕು ವರ್ಷಗಳಿಂದ ಮಾಧ್ಯಮ, ಪತ್ರಿಕೆಗಳು ಸುದ್ದಿ ಮಾಡಿದ್ದರೂ ಕಲಬುರಗಿ ಗ್ರಾಮಾಂತರ ಶಾಸಕ ಬಸವರಾಜ್ ಮತ್ತಿಮುಡ್, ಮಾಜಿ ಸಂಸದ ಉಮೇಶ್ ಜಾದವ್ ಅವರುಗಳು ಈ ರಸ್ತೆ ದುರಸ್ತಿ ಮಾಡುವ ಮನಸ್ಸು ಮಾಡಿಲ್ಲ” ಎಂದು ಆರೋಪಿಸಿದರು.

ಈ ಬಗ್ಗೆ ಈ ದಿನ.ಕಾಮ್ ಕಲಬುರಗಿ ಉತ್ತರ ವಲಯ ಶಾಸಕಿ ಕನೀಝ್ ಫಾತಿಮಾ ಅವರನ್ನು ದೂರವಾಣಿ ಸಂಪರ್ಕಿಸಿದಾಗ, ಹಾಗರಗಾ ಮುಖ್ಯ ರಸ್ತೆಯು ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವುದಾದಲ್ಲಿ ನಾನು ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬಾರದೇ ಇದ್ದರೆ ಅದಕ್ಕೆ ಸರ್ಕಾರದಿಂದ ಅನುದಾನ ತರಲು ನಮಗೆ ಸಾಧ್ಯವಾಗುವುದಿಲ್ಲ. ಯಾವುದಕ್ಕೂ ವಿಚಾರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಕಲಬುರಗಿ ಗ್ರಾಮಾಂತರ ಶಾಸಕ ಬಸವರಾಜ್ ಮತ್ತಿಮುಡ್ ಅವರನ್ನು ಸಂಪರ್ಕಿಸಲು ಯತ್ನಿಸಲಾಯಿತಾದರೂ, ಮಾತುಕತೆಗೆ ಲಭ್ಯರಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ವರದಿ ಫಲಶೃತಿ | ವಡ್ಡರ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಜೇವರ್ಗಿ ತಹಶೀಲ್ದಾರ್‌

“ಈ ರಸ್ತೆಯಲ್ಲಿರುವ ಇನಾಮದಾರ್ ಕಾಲೇಜು, ಡೆಕ್ಕನ್‌ ನರ್ಸಿಂಗ್ ಕಾಲೇಜು, ಇತರೆ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ ಆದಷ್ಟು ಬೇಗ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗಮನ ಹರಿಸಿ ಈ ರಸ್ತೆ ಸರಿಪಡಿಸಬೇಕು” ಎಂದು ಮನವಿ ಮಾಡಿದರು.

WhatsApp Image 2026 05 02 at 12.01.27 e1777704270988
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...