ಕಲಬುರಗಿ | ಭಾರಿ ಮಳೆ : ಅಲೆಮಾರಿ ಗುಡಿಸಲಿಗೆ ನುಗ್ಗಿದ ನೀರು, ರಾಜ್ಯ ಹೆದ್ದಾರಿ ಸೇತುವೆ ಕುಸಿತ

Date:

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ‌ ಮಳೆ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಅವಾಂತರ ಸೃಷ್ಟಿ ಮಾಡಿದೆ.

- Advertisement -

ಜೇವರ್ಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಹೊಲ, ಮನೆಗಳಲ್ಲಿ ನೀರು ನುಗ್ಗಿ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿವೆ. ದಿನ ಬಳಕೆಯ ವಸ್ತುಗಳು ಸೇರಿದಂತೆ ವಿವಿಧ ಸಾಮಗ್ರಿಗಳು ನೀರು ಪಾಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಜೇವರ್ಗಿ ಪಟ್ಟಣ ಅಲೆಮಾರಿ ಜನಾಂಗ ವಾಸಿಸುವ ವಾರ್ಡ್‌ -16 ಹಾಗೂ ವಾರ್ಡ್-‌1ರಲ್ಲಿ ಗುಡಿಸಲುಗಳಿ ಅಪಾರ ಪ್ರಮಾಣದಲ್ಲಿ ಮಳೆ ನೀರು ನುಗ್ಗಿ ದವಸ, ಧಾನ್ಯ ಸೇರಿದಂತೆ ಸಾಮಾಗ್ರಿಗಳು ಹಾನಿಯಾಗಿವೆ.

WhatsApp Image 2025 08 28 at 1.12.15 PM

ಈ ವೇಳೆ ಅಲೆಮಾರಿ ಮುಖಂಡರು ಮಾತನಾಡಿ, ʼಭಾರಿ ಮಳೆಯಿಂದ ಗುಡಿಸಲುಗಳಿಗೆ ಮಳೆ ನೀರು ನುಗ್ಗಿ ಅಸ್ತವ್ಯಸ್ತಗೊಂಡಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದೆವು. ಈ ಕುರಿತು ಶಾಸಕ ಅಜಯ ಸಿಂಗ್‌, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆʼ ಎಂದು ಜೇವರ್ಗಿಯ ಟಿಪ್ಪು ಸುಲ್ತಾನ್ ಸಮಿತಿಯ ಅಧ್ಯಕ್ಷ ಮೊಹಿಯುದ್ದೀನ್ ಇನಾಮದಾರ ಹೇಳಿದರು,

‘ಅಧಿಕಾರಿಗಳು ಗುಡಿಸಲು ವಾಸಿಗಳ ಸಮಸ್ಯೆ ಆಲಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಕುಟುಂಬಗಳಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿಕೊಂಡುವಂತೆ’ ಎಂದು ಅವರು ಆಗ್ರಹಿಸಿದರು.

ಸೇತುವೆ ಕುಸಿತ : ಸಂಪರ್ಕ ಸ್ಥಗಿತ

ಭಾರಿ ಮಳೆಯಿಂದಾಗಿ ಕಮಲಾಪುರ-ಜೀವಣಗಿ ಮಾರ್ಗವಾಗಿ ಚಿಂಚೋಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ರಸ್ತೆ-126 ಮಧ್ಯೆ ತಾತ್ಕಾಲಿಕವಾಗಿ ನಿರ್ಮಿಸಲಾದ ಸೇತುವೆ ಕುಸಿದ ಹಿನ್ನೆಲೆ ಸಂಪರ್ಕ ಕಡಿತಗೊಂಡಿದೆ.

WhatsApp Image 2025 08 28 at 8.59.02 PM

ಕಮಲಾಪುರ ಪಟ್ಟಣ ಹಾಗೂ ಜೀವಣಗಿಗೆ ಸಂಪರ್ಕ ಕಲ್ಪಿಸುವ ಮಾರ್ಗಮಧ್ಯದ ಸೇತುವೆ ಕಳೆದ ವರ್ಷ ಮಳೆಗಾಲದಲ್ಲಿ ಬಿದ್ದು ಸಂಪರ್ಕ ಕಡಿತಗೊಂಡು ಎರಡು ತಿಂಗಳಾದರೂ ಕ್ರಮಕ್ಕೆ ಮುಂದಾಗಲಿಲ್ಲ. ಈ ಕುರಿತು ಈದಿನ.ಕಾಮ್ ವರದಿ ಪ್ರಕಟಿಸಿದ ನಂತರ ತಾತ್ಕಾಲಿಕವಾಗಿ ಸಿಡಿ, ಮುರಮು ಹಾಕಿ ಸೇತುವೆ ನಿರ್ಮಾಣ ಮಾಡಿದರು.

ಇದನ್ನೂ ಓದಿ : ಬೀದರ್‌ | ಮಳೆ ಅಬ್ಬರ, ನದಿ, ಕೆರೆಗಳಲ್ಲಿ ಉಬ್ಬರ, ಜನಜೀವನ ತತ್ತರ!

ತದನಂತರ ಶಾಶ್ವತ ಸೇತುವೆ ನಿರ್ಮಿಸುವುದಾಗಿ ಅಧಿಕಾರಿಗಳು ಹೇಳಿದರೂ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಮತ್ತೆ ಸೇತುವೆ ಕುಸಿದಿದ್ದು, ಶಾಶ್ವತ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...