ಕಲಬುರಗಿ | ಭಾರಿ ಮಳೆ-ಗಾಳಿ : ಮನೆ ಮೇಲಿಂದ ಬಿದ್ದು 11 ವರ್ಷದ ಬಾಲಕಿ ಸಾವು

Date:

ಭಾರಿ ಮಳೆ-ಗಾಳಿಗೆ ಮನೆ ಮೇಲಿಂದ ಬಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ (ಕೆ) ಗ್ರಾಮದಲ್ಲಿ ನಡೆದಿದೆ.

- Advertisement -

ಮೃತ ಬಾಲಕಿಯನ್ನು ಪ್ರಿಯದರ್ಶಿನಿ ನಿಂಗಪ್ಪ ಹೊಸಮನಿ (11) ಎಂದು ತಿಳಿದುಬಂದಿದೆ. ಏಪ್ರಿಲ್‌ 8ರಂದು ಸಂಜೆ ಬಿರುಗಾಳಿ ಬೀಸಲು ಪ್ರಾರಂಭಿಸಿದಾಗ ಮನೆ‌ ಮಾಳಿಗೆಯ ಮೇಲಿದ್ದ ಬಟ್ಟೆ ತೆಗೆಯಲು ಬಾಲಕಿ ಹೋಗಿದ್ದಾಳೆ. ಮಳೆ-ಗಾಳಿಯ ಆರ್ಭಟ ಹೆಚ್ಚಾಗಿ ನಿಯಂತ್ರಣ ತಪ್ಪಿ ಮನೆ‌ ಮೇಲಿಂದ ಕೆಳಗೆ ಬಿದ್ದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗಂಭೀರ ಗಾಯಗೊಂಡ ಬಾಲಕಿಯನ್ನು ಜೇವರ್ಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...