ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

Date:

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ, ಅವರನ್ನು ಹಿಂದೂತ್ವದ ಚೌಕಟ್ಟಿನಲ್ಲಿ ಬಿಂಬಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಬಸವ ತತ್ವ ಹಾಗೂ ಸಂವಿಧಾನ ಸಂರಕ್ಷಣೆ ಹೋರಾಟ ಸಮಿತಿ, ಬಸವಣ್ಣನವರನ್ನು ‘ಹಿಂದೂ ಬಸವಣ್ಣ’ ಎಂದು ಬಿಂಬಿಸುವ ಮೂಲಕ ಅವರ ಮೂಲ ಆಶಯ ಮತ್ತು ವಚನ ಪರಂಪರೆಯನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ವಿರೋಧಿಸುವುದಾಗಿ ತಿಳಿಸಿದೆ.

- Advertisement -

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, 12ನೇ ಶತಮಾನದಲ್ಲಿ ಬಸವಣ್ಣ ಹಾಗೂ ಬಸವಾದಿ ಶರಣರು ಸಮಾಜದಲ್ಲಿದ್ದ ಜಾತಿ ವ್ಯವಸ್ಥೆ, ಅಸಮಾನತೆ, ಲಿಂಗತಾರತಮ್ಯ ಮತ್ತು ವೈದಿಕ ಕರ್ಮಕಾಂಡಗಳನ್ನು ಪ್ರಶ್ನಿಸಿದ್ದರು. ಕಾಯಕ, ದಾಸೋಹ, ಸಮಾನತೆ ಹಾಗೂ ಮಾನವ ಘನತೆಯ ಆಧಾರದ ಮೇಲೆ ಸಮಾಜ ನಿರ್ಮಾಣದ ಆಶಯವನ್ನು ಪ್ರತಿಪಾದಿಸಿದ್ದರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ವಚನ ಸಾಹಿತ್ಯವು ಧಾರ್ಮಿಕ ವಿಚಾರಗಳಿಗೆ ಮಾತ್ರ ಸೀಮಿತವಾಗಿರದೆ, ಸಾಮಾಜಿಕ ಅನ್ಯಾಯ, ಜಾತಿ ತಾರತಮ್ಯ, ಮೂಢನಂಬಿಕೆ ಹಾಗೂ ಅಸಮಾನತೆಯನ್ನು ಪ್ರಶ್ನಿಸುವ ವೈಚಾರಿಕ ಪರಂಪರೆಯಾಗಿದೆ. ಇಂತಹ ಶರಣರ ವಿಚಾರಧಾರೆಯನ್ನು ಅದರ ಮೂಲ ಆಶಯದಿಂದ ಬೇರ್ಪಡಿಸಿ ನಿರ್ದಿಷ್ಟ ರಾಜಕೀಯ ಅಥವಾ ಸಾಂಸ್ಕೃತಿಕ ಚೌಕಟ್ಟಿನಲ್ಲಿ ಬಿಂಬಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು.

ವಚನಗಳ ಆಶಯ ತಿರುಚುವ ಪ್ರಯತ್ನ: ಮೀನಾಕ್ಷಿ ಬಾಳಿ

ಮೀನಾಕ್ಷಿ ಬಾಳಿ ಮಾತನಾಡಿ, ‘ಬಸವಣ್ಣನವರ ತತ್ವ–ಸಿದ್ಧಾಂತಗಳನ್ನು ಕೆಲವರು ಹಂತ ಹಂತವಾಗಿ ತಿರುಚುವ ಕೆಲಸ ಮಾಡುತ್ತಿದ್ದಾರೆ. ವಚನ ಸಾಹಿತ್ಯವನ್ನು ವಿವಿಧ ರೀತಿಯಲ್ಲಿ ವ್ಯಾಖ್ಯಾನಿಸುವ ಮೂಲಕ ಅದರ ಮೂಲ ಆಶಯವನ್ನು ಬದಲಿಸುವ ಪ್ರಯತ್ನಗಳು ಹಿಂದಿನಿಂದಲೂ ನಡೆದಿವೆ. ಜಾತೀಯತೆಯನ್ನು ಸಮರ್ಥಿಸುವ ರೀತಿಯಲ್ಲಿ ವಚನಗಳ ಅರ್ಥವನ್ನು ವ್ಯಾಖ್ಯಾನಿಸುವ ಪ್ರವೃತ್ತಿ ಕಂಡುಬರುತ್ತಿದೆ’ ಎಂದು ಆರೋಪಿಸಿದರು.

ಬಸವಣ್ಣನವರ ತತ್ವಗಳನ್ನು ಹಿಂದೂತ್ವದೊಂದಿಗೆ ಜೋಡಿಸುವುದನ್ನು ವಿರೋಧಿಸುವುದಾಗಿ ತಿಳಿಸಿದ ಅವರು, ಬಸವಣ್ಣನವರನ್ನು ಯಾವುದೇ ಒಂದು ಧಾರ್ಮಿಕ ಅಥವಾ ರಾಜಕೀಯ ಚೌಕಟ್ಟಿಗೆ ಸೀಮಿತಗೊಳಿಸದೆ, ವಚನಗಳಲ್ಲಿ ಪ್ರತಿಪಾದಿಸಿರುವ ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಆಶಯವನ್ನು ಅರ್ಥಮಾಡಿಕೊಳ್ಳಬೇಕು ಎಂದರು.

‘ಕಲಬುರಗಿ ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಚಿಂತನೆಗಳಿಗೆ ಗಟ್ಟಿಯಾದ ನೆಲೆಯಾಗಿದ್ದು, ಸಾಮಾಜಿಕ ಸಮಾನತೆ ಮತ್ತು ವೈಚಾರಿಕತೆಯ ಪರಂಪರೆ ಹೊಂದಿದೆ. ಇಂತಹ ನೆಲದಲ್ಲಿ ಬಸವ ತತ್ವವನ್ನು ತಿರುಚುವ ಪ್ರಯತ್ನಗಳಿಗೆ ಅವಕಾಶ ನೀಡುವುದಿಲ್ಲ. ಸಂಬಂಧಿಸಿದ ಸಂಘಟನೆಗಳ ಕಾರ್ಯಕ್ರಮಗಳ ಕುರಿತು ಸರ್ಕಾರ ಎಚ್ಚರಿಕೆ ವಹಿಸಬೇಕು’ ಎಂದು ಆಗ್ರಹಿಸಿದರು.

ಶರಣರ ಸೈದ್ಧಾಂತಿಕ ನೆಲೆ ದುರ್ಬಲಗೊಳಿಸಲಾಗುತ್ತಿದೆ: ಪ್ರೊ. ಆರ್.ಕೆ. ಹುಡಗಿ

ಪ್ರೊ. ಆರ್.ಕೆ. ಹುಡಗಿ ಮಾತನಾಡಿ, ‘ಬಸವಾದಿ ಶರಣರ ಸೈದ್ಧಾಂತಿಕ ನೆಲೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಶರಣರು ಪ್ರತಿಪಾದಿಸಿದ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯ ಆಶಯವನ್ನು ಬದಿಗೊತ್ತಿ, ತಮ್ಮದೇ ಸೈದ್ಧಾಂತಿಕ ಚೌಕಟ್ಟಿನಲ್ಲಿ ಬಸವಣ್ಣನವರನ್ನು ಪರಿಚಯಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಹೇಳಿದರು.

‘ಆರ್‌ಎಸ್‌ಎಸ್‌ನ ಚಟುವಟಿಕೆಗಳು ಹಾಗೂ ಅದರ ವಿಚಾರಧಾರೆಯ ಪ್ರಭಾವದ ಮೂಲಕ ಬಸವಾದಿ ಶರಣರ ಮೂಲ ತಾತ್ವಿಕತೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂಬುದು ತಮ್ಮ ಆರೋಪ. ಇಂತಹ ಬೆಳವಣಿಗೆಗಳ ವಿರುದ್ಧ ವೈಚಾರಿಕ ಹಾಗೂ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಾಗುವುದು’ ಎಂದರು.

ಬಸವಣ್ಣನವರದ್ದು ಸಮಾನತೆಯ ಸಂಸ್ಕೃತಿ: ಅರ್ಜುನ ಭದ್ರೆ

ಅರ್ಜುನ ಭದ್ರೆ ಮಾತನಾಡಿ, ‘ಬಸವಣ್ಣನವರು ಸಮಾನತೆಯ ಸಂಸ್ಕೃತಿಯನ್ನು ಪ್ರತಿಪಾದಿಸಿದವರು. ಜಾತಿ ಆಧಾರಿತ ಅಸಮಾನತೆ ಹಾಗೂ ಸಾಮಾಜಿಕ ಶೋಷಣೆಯನ್ನು ಪ್ರಶ್ನಿಸಿದ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದರು.

‘ಬಸವಣ್ಣನವರ ತತ್ವ ಮತ್ತು ಭಾರತೀಯ ಸಂವಿಧಾನದ ಆಶಯಗಳು ಸಾಮಾಜಿಕ ಸಮಾನತೆ, ನ್ಯಾಯ, ಮಾನವ ಘನತೆ ಹಾಗೂ ಸಮಾನ ಅವಕಾಶಗಳ ಪರವಾಗಿವೆ. ಹೀಗಾಗಿ ಶರಣರ ವಿಚಾರಧಾರೆಯನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವುದನ್ನು ವಿರೋಧಿಸಲಾಗುವುದು’ ಎಂದು ಹೇಳಿದರು.

ಸೆ.25ರಂದು ಬೃಹತ್ ಪ್ರತಿಭಟನಾ ರ‍್ಯಾಲಿ

‘ಬಸವ ತತ್ವ ಹಾಗೂ ಸಂವಿಧಾನ ಸಂರಕ್ಷಣೆಗಾಗಿ ಸೆ.25ರಂದು ಬೆಳಗ್ಗೆ 11 ಗಂಟೆಗೆ ಜಗತ್ ವೃತ್ತದಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಗುವುದು. ಬಳಿಕ ಬಹಿರಂಗ ಸಭೆ ಆಯೋಜಿಸಲಾಗಿದ್ದು, ವಿವಿಧ ಪ್ರಗತಿಪರ, ಬಸವಪರ ಹಾಗೂ ಸಂವಿಧಾನಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದು ಸಮಿತಿ ತಿಳಿಸಿದೆ.

‘ಬಸವಣ್ಣನವರ ಮೂಲ ಆಶಯಗಳನ್ನು ಜನರಿಗೆ ತಿಳಿಸುವುದು, ವಚನ ಸಾಹಿತ್ಯದ ಆಶಯ ತಿರುಚುವ ಪ್ರಯತ್ನಗಳನ್ನು ವಿರೋಧಿಸುವುದು ಹಾಗೂ ಬಸವ ತತ್ವವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವುದನ್ನು ತಡೆಯುವುದು ಪ್ರತಿಭಟನೆಯ ಉದ್ದೇಶವಾಗಿದೆ’ ಎಂದು ಮುಖಂಡರು ಹೇಳಿದರು.

‘ಸೆ.25ರ ಪ್ರತಿಭಟನೆಯ ಬಳಿಕವೂ ಬಸವ ತತ್ವವನ್ನು ಮಸುಕುಗೊಳಿಸುವ ಪ್ರಯತ್ನಗಳು ಮುಂದುವರಿದರೆ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಸುದ್ದಿಗೋಷ್ಠಿಯಲ್ಲಿ ಮರೆಪ್ಪ ಹಳ್ಳಿ, ಪಿಡ್ಡೆಪ್ಪ ಜಾಲಗಾರ, ಶಾಮ ನಾಟೀಕಾರ, ಸುಧಾಮ ಧನ್ನಿ, ಮಹಾಂತೇಶ ಕೌಲಗಿ, ಆರ್.ಜಿ. ಶೆಟಗಾರ, ಅಶೋಕ ಧೂಳಿ, ರವಿ ಸಜ್ಜನ, ರವೀಂದ್ರ ಶಾಬಾದಿ ಸೇರಿದಂತೆ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...