ಹೋಳಿ ಹಬ್ಬದ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಆದೇಶಿಸಿದ್ದಾರೆ. ಡಿಸಿ ಸೂಚನೆಯಂತೆ ಇಂದು ಅಬಕಾರಿ ಅಧಿಕಾರಿಗಳು ಆಳಂದ ಪಟ್ಟಣದಲ್ಲಿ ಬಾರ್‌ಗಳನ್ನು ಮುಚ್ಚಿಸುವ ಕೆಲಸ ಆರಂಭಿಸಿದ್ದಾರೆ.
ಜಿಲ್ಲೆಯ ಆಳಂದ ಪಟ್ಟಣದಲ್ಲಿ ಅಬಕಾರಿ ಅಧಿಕಾರಿಗಳು ವಿವಿಧ ಬಾರ್ ಗಳಿಗೆ ತೆರಳಿ ಅವುಗಳನ್ನು ಮುಚ್ಚುವ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರ ನಿರ್ವಹಣೆ ಸುಗಮಗೊಳಿಸುವ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಲಬುರಗಿ | ಸಿಯುಕೆ ಘಟಿಕೋತ್ಸವ; ಅಟ್ರಾಸಿಟಿ ಆರೋಪಿ ಉಪಕುಲಪತಿಯ ಅಭಿನಂದನೆ ತಿರಸ್ಕರಿಸಿದ ಸಂಶೋಧನಾರ್ಥಿ ನಂದಪ್ಪ ಪಿ
ಅಧಿಕೃತ ಮಾಹಿತಿಯ ಪ್ರಕಾರ, ಈ ನಿಷೇಧಾವಧಿಯಲ್ಲಿ ಯಾವುದೇ ರೀತಿಯ ಅಕ್ರಮ ಮದ್ಯ ಮಾರಾಟ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಪೊಲೀಸ್ ಮತ್ತು ಅಬಕಾರಿ ಇಲಾಖೆ ತಂಡಗಳು ನಿರಂತರವಾಗಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಈ ನಿರ್ಬಂಧವನ್ನು ಗೌರವಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
