ಆಳಂದ ತಾಲೂಕಿನ ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ₹26.81 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಯಿಂದ 180 ಗ್ರಾಂ ಚಿನ್ನದ ಆಭರಣಗಳು ಹಾಗೂ ₹4,23,850 ನಗದು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಮಾಲಿನ ಒಟ್ಟು ಅಂದಾಜು ಮೌಲ್ಯ ₹26,81,850 ಎಂದು ಪೊಲೀಸರು ತಿಳಿಸಿದ್ದಾರೆ.
ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ಆತನಿಂದ ಕಳವು ಮಾಡಲಾಗಿದೆ ಎನ್ನಲಾದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಪತಿ ಕಿರುಕುಳ ಆರೋಪ: ಕೊಡಲಿಯಿಂದ ಹೊಡೆದು ಪತಿಯ ಕೊಲೆ
ಪ್ರಕರಣದ ಕುರಿತು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸುವಲ್ಲಿ ಯಶಸ್ವಿಯಾದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಅಧೀಕ್ಷಕ ಅಡ್ಡೂರು ಶ್ರೀನಿವಾಸುಲು ಐಪಿಎಸ್ ಅವರು ಪ್ರಶಂಸಿಸಿ, ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.





