ನಗರದ ಉದನೂರು ರಸ್ತೆಯ ಅಮೋಘ ನಗರದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ದೇವರ ಹುಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ ₹2.50 ಲಕ್ಷ ನಗದು ಸೇರಿದಂತೆ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಉಮೇಶ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಹೊರಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ದೇವರ ಹುಂಡಿಯಲ್ಲಿದ್ದ ಸುಮಾರು ₹2.50 ಲಕ್ಷ ನಗದು, ಮೂರು ಗ್ರಾಂ ಚಿನ್ನ ಹಾಗೂ 26 ತೊಲೆ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಅಂಬೇಡ್ಕರ್ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ; ಮುಖ್ಯ ಶಿಕ್ಷಕರ ಅಮಾನತಿಗೆ ದಲಿತ ಸೇನೆ ಆಗ್ರಹ
ಘಟನೆಗೆ ಸಂಬಂಧಿಸಿದಂತೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ.





