ಕಲಬುರಗಿ | 6ನೇ ಗ್ಯಾರಂಟಿ ಪರಿಣಾಮ ಮನೆ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Date:

ಸರ್ಕಾರದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ನಾನು ಕೊಟ್ಟಿದ್ದ ಆರನೆಯ ಗ್ಯಾರಂಟಿಯ ಪರಿಣಾಮವಾಗಿ ಸಂಸದ ಉಮೇಶ ಜಾಧವ್‌ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಜಿಲ್ಲೆಗೆ ಮಂಜೂರಾಗಿದ್ದ ಹಲವಾರು ಯೋಜನೆಗಳು ವಾಪಸ್ ಹೋಗಿವೆ. ಸಂಸದ ಉಮೇಶ ಜಾಧವ್‌ಗೆ ಯಾಕೆ ಅವುಗಳನ್ನು ಜಾರಿಗೊಳಿಸಲು ಆಗಲಿಲ್ಲ. ಅಭಿವೃದ್ದಿ ಮಾಡಿದ್ದೇವೆಂದು ಹೇಳುವ ಜಾಧವ್‌ಗೆ ಕಲಬುರಗಿ ಜಿಲ್ಲೆಯ ಅಭಿವೃದ್ದಿ ಬೇಕಿಲ್ಲ. ಈ ಎಲ್ಲ ಯೋಜನೆಗಳು ಜಾರಿಯಾಗಿದ್ದರೆ ಇಲ್ಲಿನ ಜನರಿಗೆ ಅನುಕೂಲವಾಗುತ್ತಿತ್ತು” ಎಂದು ಹೇಳಿದರು.

ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, “ಪಕ್ಷದ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿಯೊಂದು ಮನೆಗೆ ಹೋಗಿ ತಿಳಿಸಬೇಕು. ಬೂತ್ ಮಟ್ಟದಲ್ಲಿ ಅವಿರತ ಕೆಲಸ ಮಾಡಿ ಗೆಲುವಿಗೆ ಶ್ರಮಿಸಬೇಕು” ಎಂದು ಮನವಿ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, “ಮೋದಿ ಅವರು ನೀಡಿದ ಭರವಸೆಯಂತೆ ನಡೆದುಕೊಳ್ಳಲಿಲ್ಲ‌. ತಪ್ಪು ಆರ್ಥಿಕ ನೀತಿಯಿಂದಾಗಿ ದೇಶದ ಆರ್ಥಿಕತೆ ಕುಸಿದಿದೆ. ರೈತರ ಸಾಲ ಮನ್ನಾ ಮಾಡಲಿಲ್ಲ. ಎಲೆಕ್ಟ್ರಾಲ್ ಬಾಂಡ್ ದೇಶದ ಅತಿದೊಡ್ಡ ಹಗರಣವಾಗಿದೆ. ಮೋದಿ ಅವರ ಮುಖವಾಡ ಕಳಚಿದೆ. ‘ನಾ ಖಾವೂಂಗಾ ನಾ ಖಾನೇದೂಂಗಾ’ ಎನ್ನುವ ಘೋಷಣೆ ಕೇವಲ ಘೋಷಣೆಯಾಗಿ ಉಳಿದುಬಿಟ್ಟಿತು” ಎಂದು ವಾಗ್ದಾಳಿ ನಡೆಸಿದರು.

ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, “ಭ್ರಷ್ಟ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೀರಿ. ಜನರಿಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಇದು ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಆತಂಕಕ್ಕೆ ಕಾರಣವಾಗಿದೆ. ಅದಕ್ಕೆ ಮೋದಿ ಹೆದರಿದ್ದಾರೆ. ಇದರ ಪರಿಣಾಮವೇ ಇಬ್ಬರ ನಡುವೆ ಮೈತ್ರಿಯಾಗಿದೆ” ಎಂದರು.

ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಮಾತನಾಡಿ, “ಇದು ಬಸವಣ್ಣನವರ ಪುಣ್ಯಭೂಮಿ. ಇಂದು ಈ ಭಾಗಕ್ಕೆ ಬಂದಿದ್ದೇವೆ. ನೀವೆಲ್ಲ ಆಶೀರ್ವಾದ ಮಾಡಿ ರಾಧಾಕೃಷ್ಣ ಅವರನ್ನು ಗೆಲ್ಲಿಸಿ” ಎಂದರು

“ಬಿಜೆಪಿಗೆ ಭಯ ಇದೆ. ಇಡಿ, ಐಟಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್‌ನ ಹಣಕಾಸಿನ ವ್ಯವಹಾರ ಬಂದ್ ಮಾಡಲು ಅಕೌಂಟ್ ಸೀಜ್ ಮಾಡಲಾಗಿದೆ. ಕೇಜ್ರಿವಾಲ್, ಕವಿತಾ ಅವರನ್ನು ಒಳಗೆ ಹಾಕಿದ್ದಾರೆ. ಆದರೆ, ಈ ಸಲ ನೀವೆಲ್ಲ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಮಾಜಿ ಸಚಿವ ಬಾಬುರಾವ ಚಿಂಚನಸೂರು ಮಾತನಾಡಿ, “ತಮಗೆ ಚಿತ್ತಾಪುರ ತವರುಮನೆ ಇದ್ದಂತೆ. ಗುರುಮಠಕಲ್ ಗಂಡನ ಮನೆ ಇದ್ದಂತೆ. ಇಂದು ತವರು ಮನೆಗೆ ಬಂದಿದ್ದೇನೆ. ನೀವು ರಾಧಾಕೃಷ್ಣ ಅವರನ್ನು ಗೆಲ್ಲಿಸುವಂತೆ ನಿಮ್ಮ ಪಾದಕ್ಕೆ ನಮಸ್ಕರಿಸಿ ಬೇಡಿಕೊಳ್ಳುತ್ತೇನೆ” ಎಂದರು.

ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ, “ಚಿತ್ತಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕನಿಷ್ಟ 30,000 ಮತಗಳ ಲೀಡ್ ಕೊಡುತ್ತೇವೆ. ಅಫಜಲಪುರ, ಕಲಬುರಗಿ ದಕ್ಷಿಣ, ಜೇವರ್ಗಿಯವರಿಗೆ ಇದು ಸವಾಲು” ಎಂದರು.

ಕೋಲಿ ಸಮಾಜದವರಿಗೆ ಬಿಜೆಪಿ ಅನ್ಯಾಯ ಮಾಡಿದ್ದಾರೆ. ಹಾಗಾಗಿ, ಸಮಾಜದ 95% ರಷ್ಟು ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಅದ್ದೂರಿ ಮೆರವಣಿಗೆ ಮೂಲಕ ಅಭ್ಯರ್ಥಿ ಹಾಗೂ ಇತರೆ ಗಣ್ಯರನ್ನು ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಬಸವೇಶ್ವರ ಹಾಗೂ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ; ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್

ವೇದಿಕೆಯ ಮೇಲೆ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಸಚಿವ ಶರಣಬಸಪ್ಪ ದರ್ಶನಾಪುರ, ಶರಣಪ್ರಕಾಶ್ ಪಾಟೀಲ್, ಶಾಸಕ ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರು, ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಸಚಿವ ಬಾಬುರಾವ ಚಿಂಚನಸೂರು, ರೇವುಬನಾಯಕ ಬೆಳಮಗಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಭೀಮಣ್ಣ ಸಾಲಿ, ನಾಗರೆಡ್ಡಿ ಕರದಾಳ, ಭಾಗನಗೌಡ ಸಂಕನೂರು ಸೇರಿದಂತೆ ಇತರರು ಇದ್ದರು.

ಸುದ್ದಿ : ವಿಕ್ರಮ್ ತೇಜಸ್

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...