ಕಲಬುರಗಿ ವಿಭಾಗದಲ್ಲಿ ಏಪ್ರಿಲ್ 16 ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಹಿನ್ನೆಲೆ ಇಂದು ಕಲಬುರಗಿ ನಗರದ ಕೆಸಿಟಿ ಇಂಜಿನಿಯರಿಂಗ್ ಕಾಲೇಜಿಗೆ ಸಚಿವ ಶರಣಪ್ರಕಾಶ ಪಾಟೀಲ್, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯ ತರನ್ನುಮ್, ಶಾಸಕಿ ಖನೀಜ ಫಾತಿಮಾ, ಜಗದೇವ ಗುತ್ತೇದಾರ ಸೇರಿದಂತೆ ಗಣ್ಯರು ಸ್ಥಳ ಪರಿಶೀಲನೆ ನಡೆಸಿದ ನಂತರ ಉದ್ಯೋಗ ಮೇಳದ ಅಧಿಕೃತ ಪೋಸ್ಟರ್ ಬಿಡುಗಡೆಗೊಳಿಸಿದರು.
ಬಳಿಕ ಸಚಿವ ಶರಣಪ್ರಕಾಶ ಪಾಟೀಲ್ ಮಾತನಾಡಿ, “ಯುವನಿಧಿ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ 73 ಸಾವಿರ ನೋಂದಾಯಿತರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮಾಹಿತಿ ನೀಡಲಾಗಿದೆ. ನೋಂದಣಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಆನ್ ಲೈನ್ ಮೂಲಕ ನೋಂದಾಯಿಸಿಕೊಂಡು ಅಥವಾ ನೇರವಾಗಿಯೂ ಮೇಳದಲ್ಲಿ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ” ಎಂದರು.
“ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ನಿರಂತರವಾಗಿ ಈ ರೀತಿಯ ಉದ್ಯೋಗ ಮೇಳ ಹಮ್ಮಿಕೊಳ್ಳುತ್ತಿದೆ. ವೃತ್ತಿಪರ ಕೌಶಲ್ಯ ಹೆಚ್ಚಿಸಲು ನಿರಂತರ ತರಬೇತಿ, ಕಾರ್ಯಾಗಾರ ಸಹ ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.
ಇದನ್ನೂ ಓದಿ: ಕಲಬುರಗಿ | ಹೊಂಡಕ್ಕೆ ಬಿದ್ದು ಕುರಿಗಾಯಿ ಸಾವು
“ಕಲಬುರಗಿ ಉದ್ಯೋಗ ಮೇಳಕ್ಕೆ ಪೂರಕವಾಗಿ ಸಂದರ್ಶನ, ಸಂವಹನ ಕೌಶಲ್ಯ ಹೆಚ್ಚಿಸಲು ಯುವಕರಿಗೆ ಕಾಲೇಜುವಾರು ಕಾರ್ಯಾಗಾರ ಆಯೋಜಿಸಿದ್ದು, ಇದನ್ನು ಯುವ ಸಮೂಹ ಸದುಪಯೋಗಪಡಿಸಿಕೊಳ್ಳಬೇಕು” ಎಂದರು.
Reddy
Yes