ಕಲಬುರಗಿ | ಪತ್ನಿಯ ಕೊಲೆ ಪ್ರಕರಣದಲ್ಲಿ ಪತಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

Date:

ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು, ಬಳಿಕ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಕಲಬುರಗಿಯ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ನಿವಾಸಿ ಖಾಜಪ್ಪ ಚಂದಪ್ಪ ಭಾವಿಕಟ್ಟಿ (35) ಶಿಕ್ಷೆಗೆ ಗುರಿಯಾದ ಆರೋಪಿ. ಈತನ ಪತ್ನಿ ಯಲ್ಲಮ್ಮ ಕೊಲೆಯಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಯಲ್ಲಮ್ಮ ಅವರನ್ನು 2014ರಲ್ಲಿ ಖಾಜಪ್ಪ ಅವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಮದುವೆಯಾದ ಸುಮಾರು ಒಂದು ವರ್ಷದ ಬಳಿಕದಿಂದಲೇ ಮನೆ ಹಾಗೂ ಹೊಲದ ಕೆಲಸದ ವಿಚಾರವಾಗಿ ಯಲ್ಲಮ್ಮ ಅವರಿಗೆ ಪತಿ ಖಾಜಪ್ಪ ಸೇರಿದಂತೆ ಕುಟುಂಬದ ಇತರ ಸದಸ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಪ್ರಕರಣದಲ್ಲಿ ಆರೋಪಿಸಲಾಗಿತ್ತು.

2022ರ ಜನವರಿ 10ರಂದು ರಾತ್ರಿ ಯಲ್ಲಮ್ಮ ಅವರಿಗೆ ಮತ್ತೆ ನಿಂದಿಸಿ, ಹಲ್ಲೆ ನಡೆಸಿ ಕಿರುಕುಳ ನೀಡಲಾಗಿತ್ತು. ಈ ವೇಳೆ ಪ್ರಕರಣದ ಎ-2ರಿಂದ ಎ-5ರವರೆಗಿನ ಆರೋಪಿತರು ಖಾಜಪ್ಪನಿಗೆ ಯಲ್ಲಮ್ಮ ವಿರುದ್ಧ ಪ್ರಚೋದನೆ ನೀಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

ಇದಾದ ಎರಡು ದಿನಗಳ ಬಳಿಕ, 2022ರ ಜನವರಿ 12ರಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆ ಖಾಜಪ್ಪ ತನ್ನ ಪತ್ನಿ ಯಲ್ಲಮ್ಮ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಕುತ್ತಿಗೆಗೆ ಇರಿದು, ಬಳಿಕ ಬಲ ಕಿವಿಯ ಮೇಲ್ಭಾಗಕ್ಕೆ ಕಲ್ಲಿನಿಂದ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ. ಅವರು, ಸಾಕ್ಷಿಗಳ ಹೇಳಿಕೆಗಳು ಹಾಗೂ ನ್ಯಾಯಾಲಯಕ್ಕೆ ಸಲ್ಲಿಸಲಾದ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದರು. ವಿಚಾರಣೆ ವೇಳೆ ಎ-1 ಆರೋಪಿ ಖಾಜಪ್ಪ ವಿರುದ್ಧದ ಕೊಲೆ ಆರೋಪವು ಸಾಬೀತಾಗಿದೆ ಎಂದು ನ್ಯಾಯಾಲಯ ತೀರ್ಮಾನಿಸಿತು.

ಈ ಹಿನ್ನೆಲೆಯಲ್ಲಿ ಆರೋಪಿಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ, ಸ್ವಚ್ಛತಾ ಜಾಗೃತಿ ಕಾರ್ಯಕ್ರಮ

ಪ್ರಕರಣದಲ್ಲಿ ಎ-2ರಿಂದ ಎ-5ರವರೆಗಿನ ಉಳಿದ ಆರೋಪಿತರ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳಿಂದ ಸಾಬೀತಾಗದ ಹಿನ್ನೆಲೆಯಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...