ಪತ್ನಿ ಮೇಲೆ ಹಲ್ಲೆ ಮಾಡಿದ ಪತಿಯೊಬ್ಬ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಜೇವರ್ಗಿ ಮೂಲದ, ಸದ್ಯ ಘತ್ತರಗಾ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಜಗನ್ನಾಥ್ ನಾರಾಯಣ (42) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಪತ್ನಿ ಭಾಗ್ಯಲಕ್ಷ್ಮಿ ಅವರೊಂದಿಗೆ ಜಗಳ ಮಾಡಿಕೊಂಡ ಜಗನ್ನಾಥ್, ಆಕೆಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಮನೆಯಿಂದ ಹೊರ ಹೋಗಿ ಜಮೀನಿನಲ್ಲಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಭಾಲ್ಕಿ ರೈಲ್ವೆ ನಿಲ್ದಾಣದಲ್ಲಿ ತಿರುಪತಿ-ಔರಂಗಬಾದ್ ರೈಲು ನಿಲುಗಡೆ
ಆತ್ಮಹತ್ಯೆಯ ರಕ್ತಸಿಕ್ತ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.