ಕಲಬುರಗಿ | ನಾನೂ ಸಚಿವ ಸ್ಥಾನದ ಆಕಾಂಕ್ಷಿ : ಶಾಸಕ ಅಜಯ್‌ ಧರ್ಮಸಿಂಗ್

Date:

Advertisements

‌ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. 2018ರಲ್ಲೂ ಆಕಾಂಕ್ಷಿಯಾಗಿದ್ದೆ. ಅದು ಶೀಘ್ರದಲ್ಲೇ ಈಡೇರಲಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ, ಜೇವರ್ಗಿ ಶಾಸಕ ಅಜಯ್ ಸಿಂಗ್ ಹೇಳಿದರು.

ಕಲಬುರಗಿ ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಅಕ್ಟೋಬರ್ ತಿಂಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗುವುದು ಖಚಿತ, ಇದು ದಿಲ್ಲಿಯಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯಲಿದೆ. ಈ ಸಲ ಮಂತ್ರಿಯಾಗಲಿದ್ದೇನೆʼ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ತಂದೆ ಧರ್ಮಸಿಂಗ್‌ ಅವರು ಕಠಿಣ ಪರಿಸ್ಥಿತಿಯಲ್ಲಿಯೂ ಪಕ್ಷ ಬಿಟ್ಟು ಹೋಗಲಿಲ್ಲ. ನಾನು ತಂದೆಯವರಂತೆ ಪಕ್ಷ ನಿಷ್ಠೆ ಹೊಂದಿರುವೆ. ಕೆಕೆಆರ್‌ಡಿಬಿ ಅಧ್ಯಕ್ಷನಾಗಿ, ಶಾಸಕನಾಗಿ ಹಲವು ಜನಪರ ಕೆಲಸಗಳನ್ನು ಮಾಡುತ್ತಿದ್ದೇನೆ. ನನ್ನ ಕೆಲಸವನ್ನು ಹೈಕಮಾಂಡ್ ಗುರುತಿಸುವ ವಿಶ್ವಾಸವಿದೆʼ ಎಂದರು.

ಸೆ.17 ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X