ಕಲಬುರಗಿ | ಅಕ್ರಮ ಆಸ್ತಿ ಆರೋಪ; ಜೆಸ್ಕಾಂ ಎಇಇ ಅಮೃತರಾವ್ ಲೋಕಾಯುಕ್ತ ಬಲೆಗೆ

Date:

ಆದಾಯಕ್ಕೆ ಮೀರಿ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತರಾವ್ ಯಲಾಲ್ ಅವರಿಗೆ ಸೇರಿದ ನಿವಾಸ, ಕಚೇರಿ ಹಾಗೂ ಇತರೆ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು.

- Advertisement -

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ನೇತೃತ್ವದಲ್ಲಿ ಆರು ವಿಶೇಷ ತಂಡಗಳನ್ನು ರಚಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಕಲಬುರಗಿ ನಗರದ ಜಾಗೃತಿ ಕಾಲೊನಿಯಲ್ಲಿರುವ ಮನೆ, ಬಸವ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್, ಕೊತ್ತಂಬರಿ ಲೇಔಟ್‌ನಲ್ಲಿರುವ ಜೆಸ್ಕಾಂ ಕಚೇರಿ, ಜಾಗೃತಿ ಕಾಲೊನಿಯಲ್ಲಿರುವ ಸಂಬಂಧಿಕರ ಮನೆ, ಸೇಡಂ ರಸ್ತೆಯಲ್ಲಿರುವ ಪ್ಲಾಟಿನಂ ಸ್ಟುಡಿಯೋ ಹಾಗೂ ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮದ ಮೂಲ ನಿವಾಸ ಸೇರಿದಂತೆ ಒಟ್ಟು ಏಳು ಸ್ಥಳಗಳಲ್ಲಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...
2255226

ಶೋಧ ಕಾರ್ಯಾಚರಣೆಯಲ್ಲಿ ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ಆಸ್ತಿಗಳು, ಕಲಬುರಗಿ ನಗರದ ವಿವಿಧ ಫ್ಲ್ಯಾಟ್‌ಗಳು, ಸುಲೇಪೇಟ ಭಾಗದಲ್ಲಿರುವ 20ಕ್ಕೂ ಹೆಚ್ಚು ಎಕರೆ ಕೃಷಿ ಜಮೀನು ಹಾಗೂ ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಯಿತು. ಬ್ಯಾಂಕ್ ಖಾತೆಗಳ ವ್ಯವಹಾರಗಳು, ಹೂಡಿಕೆ ವಿವರಗಳು, ಆಸ್ತಿ ದಾಖಲೆಗಳು ಸೇರಿದಂತೆ ಹಲವು ಹಣಕಾಸು ಸಂಬಂಧಿತ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಎದೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಬಳಿಕ ಆಸ್ತಿ ಮೌಲ್ಯ, ಆದಾಯದ ಮೂಲ ಹಾಗೂ ಇತರೆ ಹಣಕಾಸು ವ್ಯವಹಾರಗಳ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...