ಕಲಬುರಗಿ| ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಬಿಎಸ್‌ಪಿ ಅಗ್ರಹ

Date:

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಬಿಎಸ್‌ಪಿ(ಬಹುಜನ ಸಮಾಜ ಪಕ್ಷ) ಕಲಬುರಗಿ ಜಿಲ್ಲೆಯ ಜೇವರ್ಗಿ ಘಟಕದಿಂದ ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಹಾಗೂ ಅಬಕಾರಿ ನಿರೀಕ್ಷಕರು ವಲಯ ಜೇವರ್ಗಿರವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಮನವಿ ಪತ್ರ ಸಲ್ಲಿಸಿ ತಾಲೂಕು ಸಂಯೋಜಕ ಪರಶುರಾಮ್ ನಡೆಗಟ್ಟಿ ಮಾತನಾಡಿ, “ಹಳ್ಳಿಗಳಲ್ಲಿ ದಿನದ 24 ಗಂಟೆಗಳ ಕಾಲ ಮದ್ಯ ದೊರೆಯುತ್ತಿದೆ. ಹಾಗಾಗಿ ಅಲ್ಲಿನ ಕೆಲ ಜನರು, ಕಾರ್ಮಿಕರು ಬೆಳಿಗ್ಗೆ 6ರಿಂದ ರಾತ್ರಿಯವರೆಗೂ ಕುಡಿದುಕೊಂಡು ಕೆಲಸಕ್ಕೂ ಹೋಗದೆ ನಶೆಯಲ್ಲಿ ತೇಲಾಡುತ್ತ ಕುಡಿಯಲು ಸಾಲ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸುಮಾರು ಕುಟುಂಬಗಳು ಬೀದಿಪಾಲಾಗುತ್ತಿವೆ. ಕೌಟುಂಬಿಕ ಹಾಗೂ ಸಾಮಾಜಿಕ ಕಲಹಗಳು ಹೆಚ್ಚಾಗಿ ಅಶಾಂತಿ ಮೂಡುತ್ತಿದೆ. ಸಣ್ಣಪುಟ್ಟ ಮಕ್ಕಳು ಹಾಗೂ ವಿದ್ಯಾರ್ಥಿಗಳ ಮೇಲೆ ತುಂಬಾ ಪ್ರಭಾವ ಬೀರಿ ದಾರಿ ತಪ್ಪುವಂತಾಗುತ್ತಿದೆ. ಸಮಾಜದಲ್ಲಿ ಪುಜ್ಞಾವಂತರು ಎನಿಸಿಕೊಂಡಿರುವ ನಾವೆಲ್ಲರೂ ಇದನ್ನು ಗಮನಹರಿಸದಿರುವುದು ನಿಜವಾಗಿಯೂ ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವೈನ್ ಶಾಪ್ ಮತ್ತು ಬಾರ್‌ಗಳ ಮಾಲೀಕರು ತರಕಾರಿ ಮಾರುವಂತೆ ಪ್ರತಿ ಹಳ್ಳಿಗಳ ಅಂಗಡಿ ಮತ್ತು ಹೋಟೆಲ್‌ಗಳಿಗೆ ರಾಜಾರೋಷವಾಗಿ ಸರಬರಾಜು ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮದ್ಯ ಮಾರಾಟ ತೊಡಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ಮೌನವಹಿಸಿ ಏನೂ ಗೊತ್ತಿಲ್ಲದಂತಿದ್ದಾರೆ. ಈ ಅವ್ಯವಹಾರಕ್ಕೆ ಅಬಕಾರಿ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ” ಎಂದು ದೂರಿದರು.

ಬಹುಜನ ಸಮಾಜ ಪಕ್ಷ ಉಪಾಧ್ಯಕ್ಷ ತಿಪ್ಪಣ್ಣ ಎಂ ಕಿನೋರ ಮಾತನಾಡಿ, “ಜೇವರ್ಗಿ ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಮತ್ತು ನಗರದ ವಾರ್ಡ್‌ಗಳಲ್ಲಿ ವೈನ್‌ಶಾಪ್ ಮತ್ತು ಬಾರ್‌ಗಳಿಂದ ಮದ್ಯ ಖರೀದಿಸಿ ಹಳ್ಳಿ ಮತ್ತು ವಾರ್ಡ್‌ಗಳ ಕಿರಾಣಿ ಅಂಗಡಿ, ಪಾನ್ ಶಾಪ್‌, ಚಹಾದಂಗಡಿ ಸೇರಿದಂತೆ ಇನ್ನೂ ಕೆಲವರು ಮನೆಯಲ್ಲಿಯೇ ಯಾವುದೇ ಭಯವಿಲ್ಲದೆ ರಾಜಾರೋಷವಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಳ್ಳಿಗಳಿಗೆ ಮತ್ತು ನಗರದ ವಾರ್ಡ್‌ಗಳಿಗೆ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿರುವ ವೈನ್‌ಶಾಪ್ ಮತ್ತು ಬಾರ್ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದು ಮಾಡಬೇಕು. ವೈನ್ ಶಾಪ್ ಮತ್ತು ಬಾರ್‌ಗಳಲ್ಲಿ ಮದ್ಯ ಖರೀದಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಸಾಥ್ ನೀಡುತ್ತಿರುವ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ಮಂಡಳಿಯಿಂದ ಆಗುತ್ತಿರುವ ಅನ್ಯಾಯ ಸರಿಡಿಸಲು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

“ಕೆಲವು ವೈನ್‌ಶಾಪ್‌ಗಳು ಮತ್ತು ಬಾರ್‌ಗಳು, ಶಾಲೆ, ದೇವಸ್ಥಾನ, ಮಹಾಪುರುಷರ ಪುತ್ಥಳಿ ಹತ್ತಿರವೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇಂತಹ ವೈನ್‌ಶಾಪ್ ಮತ್ತು ಬಾರ್‌ಗಳನ್ನು ಪರಿಶೀಲಿಸಿ ಸ್ಥಳಾಂತರಿಸಬೇಕು. ಪ್ರತಿ ಹಳ್ಳಿಗೆ ಪೊಲೀಸ್ ಇಲಾಖೆಯಿಂದ ಒಬ್ಬರನ್ನು ಪೊಲೀಸ್ ಬೀಟ್‌ ಎಂದು ನೇಮಕ ಮಾಡಿ ಬೇರೆ ಬೇರೆ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ನೇಮಕ ಮಾಡಿದ್ದು, ಅವರೂ ಕೂಡ ಈ ಅಕ್ರಮ ಮದ್ಯ ಮಾರಾಟದ ತಪಾಸಣೆ ನಡೆಸಿ ಮದ್ಯ ಮಾರಾಟ ನಿಲ್ಲಿಸುವಂತೆ ಸೂಚಿಸಬೇಕು” ಎಂದರು.

ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ತಾಲೂಕು ಅಧ್ಯಕ್ಷ ಧರ್ಮರಾಯ ಎಸ್ ಎಲಿಮನಿ, ಪಾಟೀಲ್ ರಾಸಣಗಿ, ಶರಣು ಪೂಜಾರಿ, ಹುಸೇನಿ ರಾಸಣಗಿ, ಹಣಮಂತ ಬೋವಿ, ಸಂಗನಗೌಡ ಅಂಗಡಿ, ದೇವೀಂದ್ರ ಬಣಮಿಗಿ, ಕೃಷ್ಣ ಅಡವಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...