ಕಲಬುರಗಿ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ಬಯಲು; ₹5.95 ಲಕ್ಷ ಮೌಲ್ಯದ 17.5 ಟನ್ ಅಕ್ಕಿ ವಶ

Date:

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ.

- Advertisement -

ಖಚಿತ ಮಾಹಿತಿಯ ಮೇರೆಗೆ ಪಟ್ಟಣದ ಬಸವೇಶ್ವರ ವೃತ್ತದ ಬಳಿ ವಾಹನವನ್ನು ತಡೆದು ಪರಿಶೀಲಿಸಿದಾಗ, ತಲಾ 50 ಕೆಜಿ ತೂಕದ 350 ಚೀಲಗಳಲ್ಲಿ ಒಟ್ಟು 17,500 ಕೆಜಿ ಅಕ್ಕಿ ಪತ್ತೆಯಾಗಿದ್ದು, ಜಪ್ತಿ ಮಾಡಿದ ಅಕ್ಕಿಯ ಅಂದಾಜು ಮೌಲ್ಯ ₹5.95 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಾಥಮಿಕ ತನಿಖೆಯಲ್ಲಿ, ಈ ಅಕ್ಕಿಯನ್ನು ಜೇರಟಗಿ, ಮೋರಟಗಿ, ಘತ್ತರಗಿ ಹಾಗೂ ಅಫಜಲಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲು ಸಿದ್ಧತೆ ನಡೆಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಸಾಗಣೆಗೆ ಬಳಸಲಾಗಿದ್ದ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆಯಲಾಗಿದೆ.

ಇದನ್ನು ಓದಿದ್ದೀರಾ? RSS ಅವಹೇಳನ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಹ್ಯಾರಿಸ್‌ಗೆ ಕೋರ್ಟ್‌ ಸಮನ್ಸ್‌

ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...